ವಿದ್ಯಾರ್ಥಿಗಳ ಆರೋಗ್ಯ ರಕ್ಷಣೆಯೊಂದಿಗೆ ಪರೀಕ್ಷೆ ನಡೆಸಿ: ರಾಜಾ ಮದನಗೋಪಾಲ ನಾಯಕ

0
88

ಸುರಪುರ: ರಾಜ್ಯದಲ್ಲಿ ಕೊರೊನಾ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂದರ್ಭದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಸರ್ಕಾರ ಈಬಾರಿ ಎಸ್,ಎಸ್,ಎಲ್,ಸಿ ಪರೀಕ್ಷೆಯನ್ನು ನಡೆಸುತ್ತಿದೆ, ಇತಂಹ ಸಮಯದಲ್ಲಿ ವಿದ್ಯಾರ್ಥಿಗಳ ಆರೋಗ್ಯದ ರಕ್ಷಣೆಯೊಂದಿಗೆ ಪರೀಕ್ಷೆ ನಡೆಸುವಂತೆ ಮಾಜಿ ಸಚಿವ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್‌ನ ಜಿಲ್ಲಾಧ್ಯಕ್ಷ ರಾಜಾ ಮದನಗೋಪಾಲ ನಾಯಕ ಹೇಳಿದರು.

ನಗರದ ಗರುಡಾದ್ರಿ ಕಲಾ ಮಂದಿರದಲ್ಲಿ ಗುರುವಾರ ಮಾಸ್ಕ ಡೆ ಅಂಗವಾಗಿ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ ವತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳ ಅನುಗುಣವಾಗಿ ಮಾಸ್ಕಗಳನ್ನು ವಿತರಿಸಿ ಮಾತನಾಡಿದ ಅವರು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಯಾವುದೆ ಕಾರಣಕ್ಕೂ ಹೆದರಬೇಡಿ ನಿಮ್ಮ ಶಿಕ್ಷಕರು ಮತ್ತು ಪಾಲಕರು ಹೇಳುವ ಮುಂಜಾಗೃತಾ ಕ್ರಮಗಳನ್ನು ಪಾಲಿಸಿ ಎಂದು ಹೇಳಿದರು.

Contact Your\'s Advertisement; 9902492681

ನಂತರ ಕ್ಷೇತ್ರ ಶಿಕ್ಷಣಾಧಿಕಾರಿ ನಾಗರತ್ನಾ ಓಲೆಕಾರ ಮಾತನಾಡಿ ಈಗಾಗಲೆ ಎಲ್ಲಾ ಪರೀಕ್ಷಾ ಕೇಂದ್ರದಲ್ಲಿ ಎಲ್ಲಾ ರೀತಿಯ ಮುಂಜಾಗೃತೆಯನ್ನು ವಹಿಸಲಾಗಿದೆ. ಸ್ಕೌಟ್ಸ್ ಮತ್ತು ಗೈಡ್ಸ ಸಂಸ್ಥೆಯವರು ಮಕ್ಕಳಿಗನುಗುಣವಾಗಿ ತಾಲೂಕಿನ ಎಲ್ಲಾ ೨೫ ಕೇಂದ್ರಗಳಿಗೆ ಮಾಸ್ಕಗಳನ್ನು ವಿತರಿಸುವ ಕಾರ್ಯ ಶ್ಲಾಘನೀಯವಾದದ್ದು ಎಂದು ಹೇಳಿದರು.

ಕ್ಷೇತ್ರ ಸಮನ್ವಯಾಧಿಕಾರಿ ಅಮರೇಶ ಕುಂಬಾರ, ಸ್ಕಾಟ್ಸ್ ಮತ್ತು ಗೈಡ್ಸ್ ಜಿಲ್ಲಾ ಉಪಾಧ್ಯಕ್ಷೆ ಜಯಲಲಿತಾ ಪಾಟೀಲ, ಯಲ್ಲಪ್ಪ ಕಾಡ್ಲೂರು, ಅನ್ವರ ಜಮಾದರ್, ಬಸ್ ಘಟಕ ವ್ಯವಸ್ಥಾಪಕ ಭದ್ರಪ್ಪ, ಗೀತಾ ರಾಣಿ ವೇದಿಕೆಯಲ್ಲಿದ್ದರು. ಬಿಆರ್‌ಪಿ ಖಾಧರ ಪಟೇಲ್, ಬಸವರಾಜ, ಹಣಮಂತ, ಮಾನಪ್ಪ ಸೇರಿದಂತೆ ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಹಾಗೂ ಅನೇಕ ಜನ ಶಿಕ್ಷಕರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here