ಅಫಜಲಪುರ: ಪ್ರತಿಯೊಂದು ಹಳ್ಳಿಯ ಸರ್ವಾಂಗೀಣ ಅಭಿವೃದ್ಧಿ ಮಾಡಲು ಹಗಲು ರಾತ್ರಿ ಎನ್ನದೆ ದುಡಿಯುತ್ತಿದ್ದೇನೆ ಎಂದು ಶಾಸಕರಾದ ಎಂ ವೈ.ಪಾಟೀಲ ಅಭಿಪ್ರಾಯ ಪಟ್ಟರು.
ತಾಲ್ಲೂಕಿನ ಹಸನಾಪೂರ ಗ್ರಾಮದಲ್ಲಿ ಪರಿಶಿಷ್ಟ ಪಂಗಡ ಓಣಿಯಲ್ಲಿ ಸುಮಾರು 50. ಲಕ್ಷ. ರೂಪಾಯಿ ವೆಚ್ಚದ ಸಿಸಿ ರಸ್ತೆ ಕಾಮಗಾರಿಯನ್ನು ಶಂಕುಸ್ಥಾಪನೆ ಮಾಡಿ ಮಾತನಾಡಿದ ಅವರು, ತಾಲೂಕಿನಲ್ಲಿ ಬರುವ ಪ್ರತಿಯೊಂದು ಗ್ರಾಮಗಳಲ್ಲಿಯೂ ಒಳಚರಂಡಿ, ಸಿಸಿ ರಸ್ತೆ ಹಾಗೂ ನೂತನ ಶಾಲಾ ಕಟ್ಟಡ ಕಾಮಗಾರಿಗಳು ಮಾಡುವುದರ ಮೂಲಕ ಶಾಸಕರಾಗಿ ಎರಡು ವರ್ಷದಲ್ಲಿ ಸುಮಾರು ಎರಡು ಸಾವೀರ ಕೋಟಿ ಅನುದಾನ ತಂದು ತಾಲೂಕು ಅಭಿವೃದ್ಧಿ ಪಡಿಸುತ್ತಿದ್ದೇನೆ ಎಂದು ಪಾಟೀಲರು ತಿಳಿಸಿದರು.
ಗ್ರಾಮದಲ್ಲಿ ಹಿಂದೂ ಹಾಗೂ ಮುಸ್ಲಿಂ ಸಮುದಾಯದ ಜನರಿಗೆ ತಲಾ ಎರಡೆರಡು ಎಕರೆ ಭೂಮಿಯನ್ನು ತಮ್ಮ ಸಮುದಾಯದ ಏಳ್ಗೆಗಾಗಿ ಮಂಜೂರಾತಿ ಮಾಡಿಸಿಕೊಡುತ್ತೇನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಫರಹತಬಾದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ್ ತಿಬಶೆಟ್ಟಿ, ತಾ.ಪಂ.ಸದಸ್ಯೆ ಶ್ರೀಮತಿ ಅಂಬಿಕಾ ಶರಣಗೌಡ,ಗ್ರಾ.ಪಂ.ಅಧ್ಯಕ್ಷ ಚೆನ್ನು ಬುಳ್ಳಾ,ಮಾಜಿ ತಾ.ಪಂ.ಸದಸ್ಯರಾದ ಸೀತಾರಾಮ ಸುಬೇದಾರ್, ಸಾಯಿಬಣ್ಣಾ ಪೂಜಾರಿ, ಗ್ರಾ.ಪಂ.ಸದಸ್ಯರಾದ ಖಜಾಸಾಬ ಫರಹತಾಬಾದ,ಚೆನ್ನುಗೌಡ ನಡುವಿನಹಳ್ಳಿ, ಸಾಯಿಬಣ್ಣಾ ಹಾಗೂ ಇನ್ನಿತರ ಸುತ್ತಲಿನ ಗ್ರಾಮದ ಮುಖಂಡರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…