ಬಿಸಿ ಬಿಸಿ ಸುದ್ದಿ

ವಿಧಾನ ಪರಿಷತ್ ಸ್ಥಾನಗಳಿಗೆ ವೀರಶೈವ ಸಮುದಾಯಕ್ಕೆ ಕಡೆಗಣನೆ: ಮಠಪತಿ ಅಸಮಧಾನ

ಕಲಬುರಗಿ: ರಾಜ್ಯದಲ್ಲಿ ವಿಧಾನ ಸಭೆಯಿಂದ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದಿಂದ ಮೂರು ಪಕ್ಷಗಳು ವೀರಶೈವ ಲಿಂಗಾಯತ ಸಮುದಾಯವನ್ನು ಕಡೆಗಣಿಸಿರುವುದು ಅತ್ಯಂತ ನೋವಿನ ಸಂಗತಿಯಾಗಿದ್ದು ಉತ್ತರ ಕರ್ನಾಟಕ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಹು ದೊಡ್ಡ ಸಂಖ್ಯೆಯಲ್ಲಿರುವ ವೀರಶೈವ ಲಿಂಗಾಯತ ಸಮುದಾಯದ ನಾಯಕರನ್ನು ಏಕೆ ಪರಿಗಣಿಸಲಿಲ್ಲವೆಂದು ಅಖಿಲ ಭಾರತ ವೀರಶೈವ ಮಹಾಸಭೆಯ ಕಲಬುರಗಿ ಜಿಲ್ಲಾ ಘಟಕದ ಕಾರ್ಯಕಾರಿ ಸಮಿತಿ ಸದಸ್ಯ ನಾಗಲಿಂಗಯ್ಯ ಮಠಪತಿ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು ಭಾರತೀಯ ಜನತಾ ಪಕ್ಷ, ಕಾಂಗ್ರೆಸ್ ಪಕ್ಷ ಹಾಗೂ ಜೆ.ಡಿ.ಎಸ್. ಮೂರು ಪಕ್ಷಗಳು ವೀರಶೈವ ಲಿಂಗಾಯತ ಸಮುದಾಯವನ್ನು ಚುನಾವಣೆಯಲ್ಲಿ ಕೇವಲ ಮತ ಬ್ಯಾಂಕ ಆಗಿ ಮಾತ್ರ ಪರಿಗಣಿಸುವಂತೆ ಕಾಣುತ್ತಿದೆ.  ವಿಶೇಷವಾಗಿ ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪನವರು ಅಧಿಕಾರಕ್ಕೆ ಬಂದಾಗಲೊಮ್ಮೆ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಕುರಿತು ದೊಡ್ಡ ದೊಡ್ಡ ಮಾತಗಳನ್ನಾಡುತ್ತಾರೆ, ಆದರೆ ವೀರಶೈವ ಲಿಂಗಾಯತ ಸಮುದಾಯವನ್ನು ಮತ್ತು ಕಲ್ಯಾಣ ಕರ್ನಾಟಕವನ್ನು ಕಡೆಗಣಿಸಿರುವುದು ಅತ್ಯಂತ ಸ್ಪಷ್ಟವಾಗಿ ಎದ್ದು ಕಾಣುತ್ತಿದ್ದು ಕೇವಲ ಕಲ್ಯಾಣ ಕರ್ನಾಟಕವೆಂದು ಘೋಷಣೆ ಮಾಡಿದರೆ ಅಭಿವೃದ್ಧಿಯಾಗುವುದಿಲ್ಲ, ವಾಸ್ತವವಾಗಿ ಸ್ಥಳೀಯ ಶಾಸಕರುಗಳಿಗೆ ಮಹತ್ವದ ಖಾತೆ ನೀಡಬೇಕು.

ಹಿಂದೆ ಬಿ.ಎಸ್. ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗಿದ್ದಾಗಲೂ ಸಹ ಸಚಿವ ಸಂಪುಟದಲ್ಲಿ ವೀರಶೈವ ಲಿಂಗಾಯತ ಸಮುದಾಯಕ್ಕೆ ಪ್ರಾತಿನಿಧ್ಯ ಸಿಗಲಿಲ್ಲ, ಈಗಲೂ ಕಲ್ಯಾಣ ಕರ್ನಾಟಕ ಭಾಗದಿಂದ ಭಾರತೀಯ ಜನತಾ ಪಕ್ಷದಿಂದ ಆಯ್ಕೆಯಾದ ವೀರಶೈವ ಲಿಂಗಾಯತ ಸಮುದಾಯದ ಯಾವ ಶಾಸಕರಿಗೂ ಮಂತ್ರಿ ಸ್ಥಾನ ನೀಡಿಲ್ಲ.  ಇದು ಅತ್ಯಂತ ನೋವಿನ ಸಂಗತಿಯಾಗಿದ್ದು, ಬರುವ ವಾರದಲ್ಲಿ ನಡೆಯುವ ವಿಧಾನ ಪರಿಷತ್ತಿಗೆ ನಾಮಕರಣ ಸಮಯದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಸಮುದಾಯದ ನಾಯಕರನ್ನು ನಾಮಕರಣ ಮಾಡಬೇಕು, ಸಚಿವ ಸಂಪುಟದಲ್ಲಿ ಈ ಭಾಗದ ಸಮುದಾಯದ ಶಾಸಕರನ್ನು ಮಂತ್ರಿಗಳನ್ನಾಗಿ ಮಾಡಬೇಕೆಂದು ಮಠಪತಿಯವರು ಒತ್ತಾಯಿಸಿದ್ದಾರೆ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

11 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

21 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

21 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

21 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago