ಕಲಬುರಗಿ: ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ರಾಹುಲ್ ಗಾಂಧಿ ಅವರ ಜನ್ಮದಿನದ ಪ್ರಯುಕ್ತ ನಗರದ ಸೂಪರ್ ಮಾರ್ಕೆಟ್ನಲ್ಲಿರುವ ಗುಡಿಸಲುಗಳಲ್ಲಿ ವಾಸವಾಗಿರುವ ಬಡ ಕುಟುಂಬಗಳಿಗೆ ಆಹಾರ ಧಾನ್ಯ ಕಿಟ್, ಸ್ಯಾನಿಟೈಜರ್, ಮಾಸ್ಕ್, ಹ್ಯಾಂಡ್ ಗ್ಲೌಸ್ ಹಾಗೂ ವಿಟಾಮಿನ್ ಮಾತ್ರೆಗಳನ್ನು ವಿತರಿಸಲಾಯಿತು. ಜಿಲ್ಲಾಧ್ಯಕ್ಷ ಈರಣ್ಣ ಝಳಕಿ, ಉಪಾಧ್ಯಕ್ಷ ಶರಣು ಡೋಣಗಾಂವ, ಶಿವಾನಂದ ಹೊನಗುಂಟಿ, ಪರಶುರಾಮ ನಾಟೇಕಾರ, ಭೀಮು, ಚಂದ್ರು, ಶಿವರಾಜ, ಬಸ್ಸು ಇದ್ದರು.