ಬಿಸಿ ಬಿಸಿ ಸುದ್ದಿ

ಸೂರ್ಯಗ್ರಹಣ ಹಿನ್ನೆಲೆ: ಭೂಮಿಯಲ್ಲಿ ಮಕ್ಕಳನ್ನು ಹೂಳಿದರೆ ಕಠಿಣ ಕ್ರಮ: ಕಲಬುರಗಿ ಡಿಸಿ ಶರತ್ ಬಿ.

ಕಲಬುರಗಿ: ಭಾನುವಾರ ಸಂಭವಿಸುವ ಸೂರ್ಯಗ್ರಹಣ ಸಮಯದಲ್ಲಿ ಮೂಢನಂಬಿಕೆಯಿAದ ವಿಕಲಚೇತನ ಮಕ್ಕಳನ್ನು ಜಿಲ್ಲೆಯಾದ್ಯಂತ ಭೂಮಿಯಲ್ಲಿ ಹೂಳದಂತೆ ನಿಷೇಧಿಸಿ ಆದೇಶ ಹೊರಡಿಸಲಾಗಿದ್ದು, ಇದನ್ನು ಉಲ್ಲಂಘಿಸಿ ಸಾರ್ವಜನಿಕರು ಯಾರಾದರು ವಿಕಲಚೇತನ ಮಕ್ಕಳನ್ನು ಭೂಮಿಯಲ್ಲಿ ಹೂಳಿದಲ್ಲಿ ಅಂತವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದ್ದಾರೆ.

ಶನಿವಾರ ಈ ಕುರಿತು ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ, ಈ ಸಂಬAಧ ಸಾರ್ವಜನಿಕರು ಅವೈಜ್ಞಾನಿಕವಾದ ಹೂಳುವ ರೂಢಿಯನ್ನು ಕೈಬಿಡಬೇಕು. ಕಳೆದ ವರ್ಷದ ಕಲಬುರಗಿ ನಗರದ ತಾಜ ಸುಲ್ತಾನಪೂರದಲ್ಲಿ ಇದೇ ರೀತಿಯ ಪ್ರಕರಣ ವರದಿಯಾಗಿದ್ದು, ಜಿಲ್ಲಾಡಳಿತದ ಗಮನಕ್ಕಿದೆ. ಭಾನುವಾರ ನಡೆಯುವ ಸೂರ್ಯಗ್ರಹಣ ದಿನದಂದು ಯಾವುದೇ ಕಾರಣಕ್ಕೂ ಇದು ಮರುಕಳಿಸಬಾರದೆಂದು ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಈ ಸಂಬAಧ ಜಿಲ್ಲೆಯಾದ್ಯಂತ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ತಹಶೀಲ್ದಾರರಿಗೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದೆ. ಇದೆಲ್ಲದರ ನಡುವೆ ಶನಿವಾರ ಜಿಲ್ಲೆಯಾದ್ಯಂತ ತಾಲೂಕಾ ಪ್ರದೇಶ, ಪಟ್ಟಣ, ಗ್ರಾಮಗಳಲ್ಲಿ ಮೂಢನಂಬಿಕೆಯ ವಿರುದ್ಧ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಮಹಾರಾಷ್ಟ ಪ್ರವಾಸ ಹಿನ್ನೆಲೆಯ ಮಕ್ಕಳಿಗೆ ಪ್ರತ್ಯೇಕ ಕೋಣೆ: ಇದೇ ಜೂನ್ ೨೫ ರಿಂದ ಜುಲೈ ೪ರ ವರೆಗೆ ನಡೆಯುವ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಕಂಟೇನ್‌ಮೆAಟ್ ಝೋನ್ ಮತ್ತು ಮಹಾರಾಷ್ಟç ಪ್ರವಾಸ ಹಿನ್ನೆಲೆಯ ವಿದ್ಯಾರ್ಥಿಗಳು ಹಾಜರಾದಲ್ಲಿ, ಅವರಿಗೆ ಪ್ರತ್ಯೇಕವಾದ ಕೋಣೆಯಲ್ಲಿ ಕೂರಿಸಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗುತ್ತದೆ. ಇದಕ್ಕಾಗಿ ಪ್ರತಿ ಪರೀಕ್ಷಾ ಕೇಂದ್ರದಲ್ಲಿ ೨ ಕೋಣೆ ಕಾಯ್ದಿರಿಸಲಾಗಿದೆ ಎಂದು ಶರತ್ ಬಿ. ತಿಳಿಸಿದರು.

ಪರೀಕ್ಷೆಗೆ ಬರುವ ಎಲ್ಲಾ ಮಕ್ಕಳಿಗೆ ಹ್ಯಾಂಡ್ ಸ್ಯಾನಿಟೈಸರ್, ಮಾಸ್ಕ್ ಧರಿಸುವಿಕೆ, ಥರ್ಮಲ್ ಸ್ಕಿçÃನ್ ಸ್ಕಾö್ಯನಿಂಗ್ ಸೇರದಂತೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಇದಕ್ಕಾಗಿ ಪರೀಕ್ಷಾ ಕ್ಳೆಂದ್ರದಲ್ಲಿ ಆರೋಗ್ಯ ತಂಡ ನಿಯೋಜಿಸಲಾಗುತ್ತದೆ. ಮುಂಜಾಗ್ರತವಾಗಿ ಎಲ್ಲಾ ಸಾರಿಗೆ ಬಸ್‌ಗಳನ್ನು ಸಹ ಸ್ಯಾನಿಟೈಸ್ ಮಾಡಲು ಸಾರಿಗೆ ಸಂಸ್ಥೆಗೆ ನಿರ್ದೇಶನ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ೨೪೪೬ ಜನ: ಕೊರೋನಾ ಹಿನ್ನೆಲೆಯಲ್ಲಿ ವಿವಿಧ ರಾಜ್ಯದಿಂದ ಜಿಲ್ಲೆಗೆ ಇದೂವರೆಗೆ ಆಗಮಿಸಿದ ೪೩೧೨೭ ಪೈಕಿ ೪೦೬೮೦ ಜನರನ್ನು ಬಿಡುಗಡೆ ಮಾಡಲಾಗಿದ್ದು, ಪ್ರಸ್ತುತ ೨೪೪೬ ಜನರು ಮಾತ್ರ ಸರ್ಕಾರಿ ಕ್ವಾರಂಟೈನ್‌ನಲ್ಲಿದ್ದಾರೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ಮಾಹಿತಿ ನೀಡಿದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

9 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

19 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

19 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

19 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago