ಹೋಂ ಕ್ವಾರಂಟೈನ್ ಉಲ್ಲಂಘಿಸಿದ್ದಲ್ಲಿ ಎಫ್.ಐ.ಆರ್. ದಾಖಲು

0
51

ಕಲಬುರಗಿ: ಕೊರೋನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಸರ್ಕಾರದ ಆದೇಶದಂತೆ ಮಹಾರಾಷ್ಟçದಿಂದ ಕಲಬುರಗಿ ತಾಲೂಕಿಗೆ ಬರುವ ಸಾರ್ವಜನಿಕರಿಗೆ ಕಡ್ಡಾಯವಾಗಿ ೭ ದಿನಗಳ ಸಾಂಸ್ಥಿಕ ಕ್ವಾರಂಟೈನ್ ನಂತರ ಕೋವಿಡ್-೧೯ ಪರೀಕ್ಷೆ ನಡೆಸಿ ಮತ್ತೆ ೭ ದಿನಗಳ ಹೋಂ ಕ್ವಾರಂಟೈನ್ ಮಾಡಲಾಗುತ್ತದೆ ಎಂದು ಕಲಬುರಗಿ ತಹಶೀಲ್ದಾರ ಮಲ್ಲೇಶ ತಂಗಾ ಅವರು ಹೇಳಿದ್ದಾರೆ.

Contact Your\'s Advertisement; 9902492681

ಇದಲ್ಲದೇ ಮಹಾರಾಷ್ಟç ರಾಜ್ಯ ಹೊರತುಪಡಿಸಿ ಬೇರೆ ರಾಜ್ಯಗಳಿಂದ ಬರುವ ಜನರಿಗೆ ೧೪ ದಿನಗಳ ಕಾಲ ಹೋಂ ಕ್ವಾರಂಟೈನ್ ಮಾಡಲಾಗುವುದು. ಕಲಬುರಗಿ ತಾಲೂಕಿನ ಹೋಂ ಕ್ವಾರಂಟೈನ್‌ನಲ್ಲಿರುವ ಕೆಲವು ವ್ಯಕ್ತಿಗಳು ಸರ್ಕಾರದ ಆದೇಶ ಪಾಲನೆ ಮಾಡದೇ ಹೊರಗಡೆ ತಿರುಗಾಡುತ್ತಿರುವುದು ಕಂಡು ಬಂದಿರುತ್ತದೆ. ಇದನ್ನು ತಡೆಯಲು (ಸರ್ಕಾರದ ಆದೇಶ ಉಲ್ಲಂಘಿಸಿದ್ದಲ್ಲಿ) ಅಂತಹ ವ್ಯಕ್ತಿಗಳ ವಿರುದ್ಧ ಎಫ್.ಐ.ಆರ್. ದಾಖಲಿಸಿ ಕಾನೂನಿನ ಕ್ರಮ ಕೈಗೊಳ್ಳಲಾಗುವುದಲ್ಲದೇ ಅವರಿಗೆ ಮತ್ತೆ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಇಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here