ವಿವಿಧ ವೃಂದಗಳ ಅಗ್ನಿಶಾಮಕ ಸಿಬ್ಬಂದಿಯ ೧೫೬೭ ಹುದ್ದೆಗಳಿಗೆ ಅರ್ಜಿ ಆಹ್ವಾನ

0
106

ಬೆಂಗಳೂರು: ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು ವಿವಿಧ ವೃಂದಗಳ ಅಗ್ನಿಶಾಮಕ ಸಿಬ್ಬಂದಿಯ ೧೫೬೭ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಅಗ್ನಿಶಾಮಕ ಠಾಣಾಧಿಕಾರಿಗಳ ೩೬ ಹುದ್ದೆಗಳು, ಅಗ್ನಿಶಾಮಕ ಚಾಲಕರ ೨೨೭ ಹುದ್ದೆಗಳು, ಚಾಲಕ ತಂತ್ರಜ್ಞರ ೮೨ ಹುದ್ದೆಗಳು ಹಾಗೂ ಅಗ್ನಿಶಾಮಕರ ೧೨೨೨ ಹುದ್ದೆಗಳಿಗೆ ಈ ನೇಮಕಾತಿ ಒಳಗೊಂಡಿದೆ. ಅಂತರ್ಜಾಲ www.ksp.gov.in ಲಾಗ್ ಇನ್ ಆಗಿ ಜೂನ್ ೨೨ ರಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು. ಅರ್ಜಿಗಳನ್ನು ಸಲ್ಲಿಸಲು ಜುಲೈ ೨೦ ಕೊನೆಯ ದಿನಾಂಕವಾಗಿದೆ.

Contact Your\'s Advertisement; 9902492681

ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಗೆ ಸೇರ್ಪಡೆಯಾಗಿ ಅಮೂಲ್ಯ ಜೀವಗಳನ್ನು ರಕ್ಷಿಸಲು ಇದೊಂದು ಸದಾವಕಾಶವಾಗಿದೆ ಎಂದು ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಮಹಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಲಬುರಗಿ (ನಗರ): ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟ

ಕಲಬುರಗಿ: ಕಲಬುರಗಿ (ನಗರ) ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ೧೦ ಅಂಗನವಾಡಿ ಸಹಾಯಕಿಯರ ಹುದ್ದೆಗಳ ಹಾಗೂ ೨೧ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳಿಗೆ (ಸೇವಾ ಹಿರಿತನದ ಆಧಾರದ ಮೇರೆಗೆ) ಅಂಗನವಾಡಿ ಸಹಾಯಕಿಯರನ್ನು ಅಂಗನವಾಡಿ ಕಾರ್ಯಕರ್ತೆಯಂದು ಪರಿಗಣಿಸಿ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಕಲಬುರಗಿ ನಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಪ್ಪಣಪ್ಪ ಸಿರಸಗಿ ಅವರು ತಿಳಿಸಿದ್ದಾರೆ.

ಕಲಬುರಗಿ (ನಗರ) ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ವ್ಯಾಪ್ತಿಯಲ್ಲಿ ಖಾಲಿಯಿರುವ ೧೨ ಅಂಗನವಾಡಿ ಸಹಾಯಕಿಯರ ಹುದ್ದೆಗಳ ಪೈಕಿ ೧೦ ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಹಾಗೂ ೩೩ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳ ಪೈಕಿ ೨೧ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳಿಗೆ ಜೂನ್ ೧೮ ರಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜರುಗಿದ ಆಯ್ಕೆ ಸಮಿತಿಯಲ್ಲಿ ಅನುಮೋದನೆ ನೀಡಿದ್ದರಿಂದ ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿಯನ್ನು ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಚಿಂಚೋಳಿ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಕಲಬುರಗಿ: ಚಿಂಚೋಳಿ ತಾಲೂಕಿನಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿರ ನೇಮಕಾತಿಗೆ ಸಂಬAಧಿಸಿದAತೆ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಚಿಂಚೋಳಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗಿದೆ ಎಂದು ಚಿಂಚೋಳಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹಾಗೂ ಆಯ್ಕೆ ಸಮಿತಿಯ ಸದಸ್ಯ ಕಾರ್ಯದಶಿಗಳು ಅವರು ತಿಳಿಸಿದ್ದಾರೆ.

ಈ ತಾತ್ಕಾಲಿಕ ಪಟ್ಟಿಗೆ ಸಂಬAಧಿಸಿದAತೆ ಆಕ್ಷೇಪಣೆಗಳಿದ್ದಲ್ಲಿ ೨೦೨೦ರ ಜೂನ್ ೨೯ ರೊಳಗಾಗಿ ಸಂಜೆ ೫.೩೦ ಗಂಟೆಯೊಳಗಾಗಿ ಸಂಬAಧಪಟ್ಟ ದಾಖಲೆಗಳೊಂದಿಗೆ ಚಿಂಚೋಳಿಯ ಚಂದಾಪುರದ ಪಟೇಲ್ ಕಾಲೋನಿಯಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಆಕ್ಷೇಪಣೆ ಸಲ್ಲಿಸಬೇಕು. ಅವಧಿ ಮೀರಿ ಬಂದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here