ಬೆಂಗಳೂರು: ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು ವಿವಿಧ ವೃಂದಗಳ ಅಗ್ನಿಶಾಮಕ ಸಿಬ್ಬಂದಿಯ ೧೫೬೭ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಅಗ್ನಿಶಾಮಕ ಠಾಣಾಧಿಕಾರಿಗಳ ೩೬ ಹುದ್ದೆಗಳು, ಅಗ್ನಿಶಾಮಕ ಚಾಲಕರ ೨೨೭ ಹುದ್ದೆಗಳು, ಚಾಲಕ ತಂತ್ರಜ್ಞರ ೮೨ ಹುದ್ದೆಗಳು ಹಾಗೂ ಅಗ್ನಿಶಾಮಕರ ೧೨೨೨ ಹುದ್ದೆಗಳಿಗೆ ಈ ನೇಮಕಾತಿ ಒಳಗೊಂಡಿದೆ. ಅಂತರ್ಜಾಲ www.ksp.gov.in ಲಾಗ್ ಇನ್ ಆಗಿ ಜೂನ್ ೨೨ ರಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು. ಅರ್ಜಿಗಳನ್ನು ಸಲ್ಲಿಸಲು ಜುಲೈ ೨೦ ಕೊನೆಯ ದಿನಾಂಕವಾಗಿದೆ.
ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಗೆ ಸೇರ್ಪಡೆಯಾಗಿ ಅಮೂಲ್ಯ ಜೀವಗಳನ್ನು ರಕ್ಷಿಸಲು ಇದೊಂದು ಸದಾವಕಾಶವಾಗಿದೆ ಎಂದು ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಮಹಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ (ನಗರ) ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ೧೦ ಅಂಗನವಾಡಿ ಸಹಾಯಕಿಯರ ಹುದ್ದೆಗಳ ಹಾಗೂ ೨೧ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳಿಗೆ (ಸೇವಾ ಹಿರಿತನದ ಆಧಾರದ ಮೇರೆಗೆ) ಅಂಗನವಾಡಿ ಸಹಾಯಕಿಯರನ್ನು ಅಂಗನವಾಡಿ ಕಾರ್ಯಕರ್ತೆಯಂದು ಪರಿಗಣಿಸಿ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಕಲಬುರಗಿ ನಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಪ್ಪಣಪ್ಪ ಸಿರಸಗಿ ಅವರು ತಿಳಿಸಿದ್ದಾರೆ.
ಕಲಬುರಗಿ (ನಗರ) ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ವ್ಯಾಪ್ತಿಯಲ್ಲಿ ಖಾಲಿಯಿರುವ ೧೨ ಅಂಗನವಾಡಿ ಸಹಾಯಕಿಯರ ಹುದ್ದೆಗಳ ಪೈಕಿ ೧೦ ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಹಾಗೂ ೩೩ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳ ಪೈಕಿ ೨೧ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳಿಗೆ ಜೂನ್ ೧೮ ರಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜರುಗಿದ ಆಯ್ಕೆ ಸಮಿತಿಯಲ್ಲಿ ಅನುಮೋದನೆ ನೀಡಿದ್ದರಿಂದ ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿಯನ್ನು ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಕಲಬುರಗಿ: ಚಿಂಚೋಳಿ ತಾಲೂಕಿನಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿರ ನೇಮಕಾತಿಗೆ ಸಂಬAಧಿಸಿದAತೆ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಚಿಂಚೋಳಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗಿದೆ ಎಂದು ಚಿಂಚೋಳಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹಾಗೂ ಆಯ್ಕೆ ಸಮಿತಿಯ ಸದಸ್ಯ ಕಾರ್ಯದಶಿಗಳು ಅವರು ತಿಳಿಸಿದ್ದಾರೆ.
ಈ ತಾತ್ಕಾಲಿಕ ಪಟ್ಟಿಗೆ ಸಂಬAಧಿಸಿದAತೆ ಆಕ್ಷೇಪಣೆಗಳಿದ್ದಲ್ಲಿ ೨೦೨೦ರ ಜೂನ್ ೨೯ ರೊಳಗಾಗಿ ಸಂಜೆ ೫.೩೦ ಗಂಟೆಯೊಳಗಾಗಿ ಸಂಬAಧಪಟ್ಟ ದಾಖಲೆಗಳೊಂದಿಗೆ ಚಿಂಚೋಳಿಯ ಚಂದಾಪುರದ ಪಟೇಲ್ ಕಾಲೋನಿಯಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಆಕ್ಷೇಪಣೆ ಸಲ್ಲಿಸಬೇಕು. ಅವಧಿ ಮೀರಿ ಬಂದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…