ಸುರಪುರ: ನಗರದ ಬಸ್ ಡಿಪೋದಲ್ಲಿ ಚಾಲಕ ಕಂ ನಿರ್ವಾಹಕ ಸೇವೆ ಸಲ್ಲಿಸುತ್ತಿದ್ದು ಓರ್ವ ವ್ಯಕ್ತಿಯಲ್ಲಿ ಪಾಸಿಟಿವ್ ಪತ್ತೆಯಾಗಿದ್ದು ಇದರಿಂದಾಗಿ ಡಿಪೋದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದ್ದು ಈತನ ಜೊತೆ ಪ್ರಾಥಮಿಕ ಸಂಪರ್ಕಿತದಲ್ಲಿರುವ ಡಿಪೋ ಮ್ಯಾನೇಜರ್, ಚಾಲಕರು, ನಿರ್ವಾಹಕರು ಹಾಗೂ ಕಚೇರಿಯ ಸಿಬ್ಬಂದಿಗಳು ಸೇರಿ ಒಟ್ಟು ೯ ಜನರನ್ನು ಹೋಂ ಕ್ವಾರಂಟೈನ್‌ಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.
ಕೋರೋನಾ ಪಾಸಿಟಿವ್ ದೃಢಪಟ್ಟಿರುವ ಚಾಲಕನಿಗೆ ಕಳೆದ ಜೂ೧೦ ರಿಂದ ಡ್ಯೂಟಿ ನೀಡಿರಲಿಲ್ಲವೆಂದು ತಿಳಿದು ಬಂದಿದ್ದು ಆದರೂ ಕೂಡಾ ಡಿಪೋಕ್ಕೆ ಬಂದು ಹೋಗುತ್ತಿದ್ದನೆಂದು ಹಾಗೂ ಸ್ನೇಹಿತ ಚಾಲಕರ ಜೊತೆ ಓಡಾಡಿದ್ದಾನೆಂದು ತಿಳಿದುಬಂದಿದೆ, ಚಾಲಕನ ಪತ್ನಿ ಸ್ಥಳೀಯ ಸರಕಾರಿ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ ಆಗಿದ್ದಾರೆ ಎಂದು ತಿಳಿದು ಬಂದಿದ್ದು ಶುಕ್ರವಾರದಂದು ಅವರಿಗೂ ಕೂಡಾ ಕೋರೋನಾ ಇರುವುದು ದೃಢಪಟ್ಟಿದ್ದು, ನಗರದ ದೀವಳಗುಡ್ಡದಲ್ಲಿ ಬಾಡಿಗೆ ಮನೆ ಇದೆ ಎನ್ನಲಾಗಿದೆ.
ಸುದ್ದಿ ತಿಳಿದ ವಿಭಾಗೀಯ ಸಂಚಲನ ಅಧಿಕಾರಿ ರಮೇಶ ಪಾಟೀಲ ಅವರು ಡಿಪೋಕ್ಕೆ ಭೇಟಿ ನೀಡಿ ಪರಿಶೀಲಿಸಿದರು, ಘಟಕವನ್ನು ಸಂಪೂರ್ಣ ಸ್ಯಾನಿಟೈಜಿಂಗ್‌ಗೊಳಿಸಲಾಗಿದ್ದು ಪಾಸಿಟಿವ್ ದೃಢಪಟ್ಟ ಚಾಲಕನನ್ನು ಈಗಾಗಲೇ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ತಿಳಿಸಿದರು.
ಡಿಪೋ ಮ್ಯಾನೇಜರ್ ಸೇರಿದಂತೆ ಒಂಭತ್ತು ಜನರನ್ನು ಪ್ರಾಥಮಿಕ ಸಂಪರ್ಕಿತರನ್ನು ಈಗಾಗಲೇ ಹೋಂ ಕ್ವಾರಂಟೈನ್‌ಗೊಳಿಸಲಾಗಿದೆ ಎಂದು ಪತ್ರಿಕೆಗೆ ಅವರು ತಿಳಿಸಿದರು, ನಾಳೆಯಿಂದ ವಾಹನಗಳ ಓಡಾಟಕ್ಕೆ ಯಾವುದೇ ರೀತಿಯಲ್ಲಿ ವ್ಯತ್ಯಯವಾಗದಂತೆ ಹಾಗೂ ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗದಂತೆ ಎಲ್ಲಾ ರೀತಿಯ ಮುಂಜಾಗೃತೆ ವಹಿಸಿ ವಾಹನಗಳನ್ನು ಓಡಿಸಲಾಗುವುದು ಎಂದು ಅವರು ತಿಳಿಸಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…