ಬಿಸಿ ಬಿಸಿ ಸುದ್ದಿ

ಅಲೆಮಾರಿ ಜನಾಂಗದವರಿಗೆ ಮನೆ ಕಟ್ಟಿಕೊಳ್ಳಲು ಶಾಸಕ ಮತ್ತಿಮಡು ಆದೇಶ ಪತ್ರ ವಿತರಣೆ

ಶಹಾಬಾದ: ಸರ್ಕಾರದಿಂದ ಬಂದ ಯೋಜನೆಗಳನ್ನು ಸದ್ಭಳಕೆ ಮಾಡಿಕೊಳ್ಳುವ ಮೂಲಕ ಅಲೆಮಾರಿ ಜನಾಂಗದವರು ಮುಖ್ಯವಾಹಿನಿಗೆ ಬರಬೇಕೆಂದು ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಹೇಳಿದರು.

ಅವರು ನಗರಸಭೆಯಿಂದ ಆಯೋಜಿಸಲಾದ ರಾಮಘಡ ಆಶ್ರಯ ಕಾಲೋನಿಯಲ್ಲಿರುವ ಅಲೆಮಾರಿ ಜನಾಂಗದವರಿಗೆ ಮನೆ ಕಟ್ಟಿಕೊಳ್ಳಲು ಕಾರ್ಯ ಆದೇಶ ಪತ್ರವನ್ನು ವಿತರಿಸಿ ಮಾತನಾಡಿದರು.

ಮನೆ ಕಟ್ಟಿಕೊಳ್ಳಲು ಸುಮಾರು ೫ ಲಕ್ಷ ರೂ. ಸಹಾಯ ಧನ ನೀಡಲಾಗುತ್ತಿದೆ. ಅದನ್ನು ನಾಲ್ಕು ಹಂತಗಳಲ್ಲಿ ನಿಮ್ಮ ಖಾತೆಗೆ ಹಾಕಲಾಗುತ್ತದೆ.ಆದ್ದರಿಂದ ಗುಣಮಟ್ಟದ ಮನೆ ನಿರ್ಮಾಣ ಮಾಡಿಕೊಳ್ಳುವುದು ನಿಮ್ಮ ಜವಾಬ್ದಾರಿ. ೧೧೮ ಮನೆಗಳಲ್ಲಿ ಸರಿಯಾದ ದಾಖಲೆ ಒದಗಿಸಿದ ಸುಮಾರು ೫೯ ಜನರಿಗೆ ಕಾರ್ಯ ಆದೇಶ ನೀಡಲಾಗಿದೆ.ಅದರ ಸುದಪಯೋಗಪಡಿಸಿಕೊಳ್ಳಿ.ಅಲ್ಲದೇ ಇಲ್ಲಿ ನೀರಿನ ಸಮಸ್ಯೆಯಿದೆ ಎಂದು ಗಮನಕ್ಕೆ ತಂದಾಗ ಕೊಳವೆ ಬಾವಿ ತೋಡಿಸಿ ನೀರಿನ ವ್ಯವಸ್ಥೆ ಮಾಡಲಾಗಿದೆ.ಅಲ್ಲದೇ ರಸ್ತೆ ನಿರ್ಮಾಣ ಮಾಡಿಕೊಡಲಾಗುತ್ತಿದೆ. ಯಾವುದೇ ಸಮಸ್ಯೆ ಇದ್ದರೇ ನನ್ನ ಗಮನಕ್ಕೆ ತನ್ನಿ ಎಂದರು.

ಈ ಸಂದರ್ಭದಲ್ಲಿ ನಗರಸಭೆಯ ಪೌರಾಯುಕ್ತ ಕೆ.ಗುರಲಿಂಗಪ್ಪ ಮಾತನಾಡಿದರು. ನಗರಸಭೆ ಸದಸ್ಯರಾದ ಭೀಮಣ್ಣ ಖಂಡ್ರೆ, ಪಾರ್ವತಿಬಾಯಿ ಪವಾರ, ಅರುಣ ಪಟ್ಟಣಕರ್, ಅಣವೀರ ಇಂಗಿನಶೆಟ್ಟಿ, ಅನೀಲ ಭೋರಗಾಂವಕರ್,ಅಣ್ಣಪ್ಪ ದಸ್ತಾಪೂರ, ನಗರಸಭೆಯ ಸದಸ್ಯರಾದ ರವಿ ರಾಠೋಡ, ಸೂರ್ಯಕಾಂತ ಕೋಬಾಳ,ತಿಪ್ಪಣ್ಣ ನಾಟೇಕಾರ, ಶಿವುಗೌಡ, ನಿಂಗಣ್ಣ ಹುಳಗೋಳಕರ್,ಸದಾನಂದ ಕುಂಬಾರ,ಅಶೋಕ ಜಿಂಗಾಡೆ, ಶರಣು ವಸ್ತ್ರದ್, ಸಂಜಯ ಸೂಡಿ,ಭಾಗಿರಥಿ ಗುನ್ನಾಪೂರ, ಜಯಶ್ರೀ ಸೂಡಿ ಇತರರು ಇದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

9 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

12 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

18 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

18 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

19 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago