ಯೋಗ ಮನುಷ್ಯನ ದೈಹಿಕ ಮತ್ತು ಮಾನಸಿಕವಾಗಿ ಸದೃಢಗೊಳಿಸುತ್ತದೆ – ಮುದ್ನೂರು

0
95
ಶಹಾಪುರ(ಗ್ರಾ): ಯೋಗ ಮಾಡುವುದರಿಂದ ಮನಸ್ಸು ಮತ್ತು ದೇಹ ಚಿಂತನೆ ಹಾಗೂ ಕ್ರಿಯೆ ಸ್ವಯಂ ಸಾರ್ಥಕತೆಯನ್ನು ಒಗ್ಗೂಡಿ ಸುವುದಲ್ಲದೇ ಪ್ರಕೃತಿ ಮತ್ತು ಮಾನವನ ನಡುವೆ ಸಾಮರಸ್ಯವನ್ನು ಉಂಟು ಮಾಡುವುದರ ಜೊತೆಗೆ ಮನುಷ್ಯನ ದೈಹಿಕ ಮತ್ತು ಮಾನಸಿಕವಾಗಿ ಸದೃಢಗೊಳಿಸುತ್ತದೆ ಎಂದು ಪತ್ರಕರ್ತ ಮಲ್ಲಿಕಾರ್ಜುನ ಮುದ್ನೂರು ಹೇಳಿದರು.
ಗೆಳೆಯರ ಬಳಗದ ವತಿಯಿಂದ ದಿಗ್ಗಿ ಸಂಗಮೇಶ್ವರ ದೇವಸ್ಥಾನದ ಮುಂಭಾಗದಲ್ಲಿ ವಿಶ್ವಯೋಗ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು.2014 ಸೆಪ್ಟೆಂಬರ್ನಲ್ಲಿ ಜರುಗಿದ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೊದಲ ಬಾರಿಗೆ ಯೋಗ ದಿನಾಚರಣೆಯ ಆಚರಣೆಯ ಕುರಿತು ಪ್ರಧಾನಿ ನರೇಂದ್ರ ಮೋದಿಯವರು ಪ್ರಸ್ತಾವನೆ ಸಲ್ಲಿಸಿದ್ದರು.
ಬಿ.ಎಸ್.ಎಫ್. ಯೋಧ ದುರ್ಗಪ್ಪ ನಾಯಕ ಮಾತನಾಡಿ ಸಾವಿರಾರು ವರ್ಷಗಳ ಹಿಂದೆ ಋುಷಿಗಳ ಚಿಂತನೆಯ ಫಲವಾದ ಯೋಗ ಬರೀ ಶಾಸ್ತ್ರವಾಗಿದೆ ಜೂನ್ 21 ರಂದು ವಿಶ್ವ ಯೋಗ ದಿನಾಚರಣೆಯನ್ನಾಗಿ ಇಂದು 177 ಏಳಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಆಚರಿಸಲಾಗುತ್ತಿದೆ ಮನುಷ್ಯನ ದೈನಂದಿನ ಒತ್ತಡದ ಬದುಕಿನಲ್ಲಿ ಪ್ರತಿಯೊಬ್ಬರಿಗೂ ಯೋಗ ಅತ್ಯವಶ್ಯಕವಾಗಿದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಜಗದೀಶ್ ಹೊನ್ಕಲ್,ರಾಜು, ಉಮೇಶ್, ರಮೇಶ್, ಮಲ್ಲಿಕಾರ್ಜುನ್ ಹಾಗೂ ಇತರರು ಭಾಗವಹಿಸಿದ್ದರು.
Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here