ಶಹಾಬಾದ: ಕರೊನಾ ಭೀತಿಯಿಂದ ಮುಂದೂಡಲಾದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ನಡೆಸಲು ಎಲ್ಲಾ ರೀತಿಯಿಂದ ಸಾರ್ವಜನಿಕ ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಂಡಿದ್ದು, ಜೂನ್ 25 ರಿಂದ ಜುಲೈ ೪ ರವರೆಗೆ ನಡೆಯುವ ಪರೀಕ್ಷೆಯನ್ನು ಯಾವುದೇ ತೊಂದರೆಯಾಗದಂತೆ, ಸುಲಲಿತವಾಗಿ ನಡೆಸಲು ಕ್ಷೇತ್ರ ಶಿಕ್ಷಣಾಧಿಕಾರಿ ಸರ್ವ ಕ್ರಮಗಳನ್ನು ತೆಗೆದುಕೊಂಡಿದ್ದಾರೆ.
ತಾಲೂಕಿನಲ್ಲಿ ಕಳೆದ ಬಾರಿ ನಾಲ್ಕು ಪರೀಕ್ಷಾ ಕೇಂದ್ರಗಳನ್ನು ಹೊಂದಿತ್ತು.ಆದರೆ ಈ ಬಾರಿ ಕರೊನಾ ವೈರಸ್ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಂಡು ಪರೀಕ್ಷೆ ಬರೆಯಲು ಕೋಣೆಗಳ ಸಂಖ್ಯೆ ಹೆಚ್ಚಿಸಲಾಗಿದೆ. ಕೋಣೆಗಳ ಗ್ರಾತಕ್ಕನುಸಾರವಾಗಿ ಒಂದು ಕೋಣೆಯಲ್ಲಿ ಸುಮಾರು ೧೦ ರಿಂದ ೨೦ ವರೆಗೆ ಕೂಡಿಸಲಾಗುತ್ತಿದೆ. ಇದರಿಂದ ಪರೀಕ್ಷಾ ಕೇಂದ್ರದಲ್ಲಿ ಕೋಣೆಗಳ ಸಂಖ್ಯೆ ಕಡಿಮೆ ಬೀಳುತ್ತಿರುವುದರಿಂದ ಎರಡು ಪರೀಕ್ಷಾ ಉಪಕೇಂದ್ರಗಳನ್ನಾಗಿ ಮಾಡಲಾಗಿದೆ. ಇದರಿಂದ ೬ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ನಗರದ ಗಂಗಮ್ಮ.ಎಸ್.ಮರಗೋಳ ಶಾಲೆ -೪೨೧, ಬಿವಿಎಮ್ ಶಾಲೆ -೨೦೦,ಸರಕಾರಿ ಪ್ರೌಢಶಾಲೆ ಭಂಕೂರ-೧೬೦, ಎಮ್‌ಸಿಸಿ ಶಾಲೆ-೩೦೯, ಸರಕಾರಿ ಬಾಲಕರ ಪ್ರೌಢಶಾಲೆ ಶಹಾಬಾದ-೧೨೫, ಬಸವ ಸಮಿತಿ ಶಾಲೆ ಭಂಕೂರ-೧೫೦ ವಿದ್ಯಾರ್ಥಿಗಳು ಸೇರಿದಂತೆ ಸುಮಾರು ೯೪೪ ವಿದ್ಯಾಥಿಗಳು ಪರೀಕ್ಷೆ ಬರೆಯಲಿದ್ದಾರೆ. ಈ ಸಂಬಂಧ ಪರೀಕ್ಷಾ ಕೇಂದ್ರಗಳನ್ನು ಈಗಾಗಲೇ ಸ್ಯಾನಿಟೈಜರ್ ಮಾಡಲಾಗಿದೆ.ಅಲ್ಲದೇ ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಆರೋಗ್ಯ ಸಿಬ್ಬಂದಿ ಕೇಂದ್ರಗಳಿಗೆ ಬರುವ ವಿದ್ಯಾರ್ಥಿಗಳ ಥರ್ಮಲ್ ಸ್ಕ್ರಿನಿಂಗ್ ತಪಾಸಣೆ ಮಾಡಿ, ಸ್ಯಾನಿಟೈಜರ್ ಮಾಡಿ ಒಳಗೆ ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ. ತಪಾಸಣೆ ವೇಳೆ ಮಗುವಿನಲ್ಲಿ ಅನಾರೋಗ್ಯ ಕಂಡು ಬಂದರೆ, ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ. ಅದಕ್ಕಾಗಿ ಪ್ರತ್ಯೇಕ ಕೋಣೆ ಕಾಯ್ದಿರಿಸಲಾಗಿದೆ.
ಮಕ್ಕಳು ಪರೀಕ್ಷೆಗೆ ಬರುವ ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಂಡು ಬರಬೇಕು.ಕುಡಿಯುವ ನೀರಿನ ಬಾಟಲ್, ಉಪಹಾರದ ಡಬ್ಬಿ ತೆಗೆದುಕೊಂಡು ಬರಬೇಕು. ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳ ಪಾಲಕರು ಪರೀಕ್ಷಾ ಕೇಂದ್ರಗಳ ಒಳಗಡೆ ಬರದೇ ಹಾಗೇ, ಗುಂಪಾಗಿ ನಿಲ್ಲದ ಹಾಗೇ ಪರೀಕ್ಷಾ ಕೇಂದ್ರದ ಅಧೀಕ್ಷಕರಿಗೆ ತಿಳಿಸಲಾಗಿದೆ.ಅದಕ್ಕೆ ಬೇಕಾದ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ತಿಳಿಸಲಾಗಿದೆ.ಚಿತ್ತಾಪೂರ ಹಾಗೂ ಶಹಾಬಾದ ತಾಲೂಕಿನ ಶಾಸಕರು, ಮಕ್ಕಳಿಗೆ ಸ್ಕೌಟ್ಸ್ ಅಂಡ ಗೈಡ್ಸ್, ಶಿಕ್ಷಣ ಇಲಾಖೆಯ ಸಿಬ್ಬಂದಿ ವರ್ಗದವರು ಮಾಸ್ಕ್ ಮತ್ತು ಸ್ಯಾನಿಟೈಜರ್‌ಗಳನ್ನು ನೀಡಲು ಮುಂದಾಗಿದ್ದಾರೆ.ಒಟ್ಟಾರೆಯಾಗಿ ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮುಂಜಾಗೃತ ಕ್ರಮವಾಗಿ ಎಲ್ಲಾ ಕ್ರಮಗಳನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಕೈಗೊಂಡಿದೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…