ಕಲಬುರಗಿ; ಗ್ರಾಮ ಪಂಚಾಯತಿಯಿಂದ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು 100 ದಿನಗಳಿಂದ 250 ದಿನಗಳಿಗೆ ಹೆಚ್ಚಿಸಬೇಕೆಂದು ಪಿಂಜಾರ್,ನದಾಫ್ ಸಂಘದ ಮಹಾಮಂಡಳಿಯ ರಾಜ್ಯಾಧ್ಯಕ್ಷ ಅಬ್ದುಲ್ ರಝಾಕ್ ನದಾಫ್ ಆಗ್ರಹಿಸಿದರು.
ನಗರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ಮಹಾಮಾರಿಯಿಂದಾಗಿ ಗ್ರಾಮೀಣ ಭಾಗದ ಜನರು ತತ್ತರಿಸಿ ಹೋಗಿದ್ದಾರೆ. ಅದರಲ್ಲೂ ಕಲ್ಯಾಣ ಕರ್ನಾಟಕ ಭಾಗದ ಕೃಷಿ ಕಾರ್ಮಿಕರು ಬೇರೆ ರಾಜ್ಯಗಳಿಂದ ವಲಸೆ ಹೋಗಿ ಬಂದಿದ್ದರಿಂದ ಸದ್ಯ ಅವರಿಗೆ ಕೆಲಸವಿಲ್ಲ, ಈ ಸಂದರ್ಭದಲ್ಲಿ ಗ್ರಾಮೀಣ ಮಟ್ಟದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ100 ದಿನಗಳವೆರೆಗೆ ಕೆಲಸ ನೀಡುತ್ತಿದ್ದು, ಕಾರ್ಮಿಕರಿಗೆ ಜನಜೀವನ ಸಾಗಿಸಲು ಸಾಧ್ಯವಾಗುತ್ತಿಲ್ಲ ಹೀಗಾಗಿ ಸರ್ಕಾರ ಎಚ್ಚೆತ್ತು ಕೂಲಿ ದಿನಗಳನ್ನು ಹೆಚ್ಚಿಸಬೇಕೆಂದು ಹೇಳಿದರು.
ಲಾಕ್ ದೌನ್ ಸಂದರ್ಭದಲ್ಲಿ ಉತ್ತರ ಕರ್ನಾಟಕದ ಸಾಕಷ್ಟು ಜನರು ಕಷ್ಟಪಟ್ಟು ಜೀವನ ಸಾಗಿಸುತ್ತಿದ್ದು, ಕೆಲಸ ವಿಲ್ಲದೆ ಪರದಾಡುತ್ತಿದ್ದಲ್ಲದೆ ಕೈಯಲ್ಲಿ ಹಣವಿರದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರಿಗೆ ಮಾಸ್ಕ್, ಸ್ಯಾನಿಟೈಜರ್, ಇನ್ನಿತರ ಸೌಲಭ್ಯಗಳು ನೀಡಬೇಕಾಗಿದ್ದು, ಈ ಸಂದರ್ಭದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.
ನಂತರ ಮುಖ್ಯಮಂತ್ರಿಯವರಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಮೌಲಾಲಿ ನದಾಫ್, ಸದಸ್ಯರಾದ ಇಸ್ಮಾಯಿಲ್ ನದಾಫ್, ಸದ್ದಾಮ್ ಹುಸೈನ್, ವಾಹಿದ್ ಅಲಿ, ದಸ್ತಗೀರ್ ನದಾಫ್, ರಫೀಕ್ ಅರಳಗುಂಡಗಿ ಸದಸ್ಯರು ಹಾಜರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…