ಬಿಸಿ ಬಿಸಿ ಸುದ್ದಿ

ಇಂಧನ ಬೆಲೆ ಏರಿಕೆ ಬಡ, ಮಧ್ಯಮ ವರ್ಗಕ್ಕೆ ಭಾರೀ ಹೊಡೆತ: ಕೇಂದ್ರದ ವಿರುದ್ಧ ವೆಲ್ಫೇರ್ ಪಾರ್ಟಿ ಆಕ್ರೋಶ

ಕಲಬುರಗಿ: ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ಹೆಚ್ಚಳ ಮಾಡಿರುವ ಕೇಂದ್ರ ಸರಕಾರದ ನಿರ್ಧಾರ ದೇಶದ ಬಡ ಹಾಗೂ ಮಧ್ಯಮ ವರ್ಗಕ್ಕೆ ಭಾರೀ ಹೊಡೆತ ನೀಡಲಿದೆ. ಸರಕಾರ ಕೂಡಲೇ ತನ್ನ ಈ ತೀರ್ಮಾನದಿಂದ ಹಿಂದೆ ಸರಿಯಬೇಕು. ಅಬಕಾರಿ ಸುಂಕ ಕಡಿತಗೊಳಿಸಿ, ಜನಸಾಮಾನ್ಯರ ಮೇಲಿನ ಹೊರೆಯನ್ನು ಇಳಿಸಬೇಕು ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾ ಸಮಿತಿ ಆಗ್ರಹಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ಮೂಲಕ ಆಕ್ರೋಶ ವ್ಯಕ್ತಪಡಿಸಲಾಯಿತು.

ಪೆಟ್ರೋಲ್, ಡೀಸೆಲ್ ಬೆಲೆ ನಿತ್ಯ ಏರಿಕೆಯಾಗುತ್ತಿದೆ. ತೈಲ ಬೆಲೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕುಸಿದಿದೆ. ಲೀಟರ್ ಗೆ ೨೫-೩೦ ರೂ. ಇರಬೇಕಿತ್ತು. ಆದರೆ, ಕೇಂದ್ರ ಸರ್ಕಾರ ದರ ಏರಿಕೆ ಮಾಡಿದೆ. ಈ ಮೂಲಕ ಮಧ್ಯಮ ವರ್ಗದವರನ್ನು ಬಲಿ ಹಾಕಲು ಹೊರಟಿದೆ ಎಂದು ಕುಟುಕಿದರು.

ಈಗಾಗಲೇ ಲಾಕ್ ಡೌನ್ ನಿಂದಾಗಿ ಕೆಲಸವಿಲ್ಲದೆ, ಆದಾಯವಿಲ್ಲದೇ ಪರದಾಡುತ್ತಿರುವ ದೇಶದ ಬಡ ಹಾಗೂ ಮಧ್ಯಮ ವರ್ಗದ ಜನರನ್ನು ಪೆಟ್ರೋಲ್ ಬೆಲೆ ಏರಿಕೆ ಇನ್ನ? ಆರ್ಥಿಕ ಸಂಕ?ಕ್ಕೆ ದೂಡಿದೆ. ದೈನಂದಿನ ಚಟುವಟಿಕೆಗಳಿಗೂ ಬೆಲೆ ಏರಿಕೆಯು ಬಲವಾದ ಹೊಡೆತ ನೀಡಲಿದೆ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಎಚ್ಚರಿಸಿದ್ದಾರೆ.

ಡೀಸೆಲ್ ಬೆಲೆ ಏರಿಕೆ ಪರಿಣಾಮದಿಂದ ಬಸ್, ರೈಲ್ವೆ ಪ್ರಯಾಣ ದರವೂ ಏರಿಕೆಯಾಗಲಿದ್ದು, ಸಾರ್ವಜನಿಕ ಸಾರಿಗೆಯನ್ನೇ ನಂಬಿ ನಿತ್ಯವೂ ತಮ್ಮ ಕೆಲಸ ಕಾರ್ಯಗಳಿಗೆ ಓಡಾಡುವ ದೇಶದ ಕೋಟ್ಯಂತರ ಬಡ-ಮಧ್ಯಮ ವರ್ಗಕ್ಕೆ ಇದು ಮತ್ತ? ಹೊರೆಯಾಗಲಿದೆ.ಹೀಗಾದರೆ ಬಡ ಜನರ ಬದುಕು ನಡೆಸುವುದಾದರೂ ಹೇಗೇ? ಎಂದು ಅವರು ಪ್ರಶ್ನಿಸಿದ್ದಾರೆ.

ಸಂಕದ ಪರಿಸ್ಥಿತಿಯಲ್ಲಿ ಉದ್ಯೋಗ ಮಾಡುತ್ತಿರುವ ನೌಕರರಿಗೆ ಅನೇಕ ಕಂಪೆನಿಗಳು ಕೇವಲ ಶೇ.೫೦ರ? ಸಂಬಳ ನೀಡುತ್ತಿವೆ. ಇಂಧನ ಬೆಲೆ ಏರಿಕೆಯು ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳ ಮೇಲೂ ವ್ಯತಿರಿಕ್ತ ಪರಿಣಾಮ ಬೀರಲಿದ್ದು, ಇಂತಹ ಸಂದರ್ಭದಲ್ಲಿ ಪೆಟ್ರೋಲ್ ಬೆಲೆ ಹೆಚ್ಚಳದ ಬಿಸಿ ಸಣ್ಣಪುಟ್ಟ ಉದ್ದಿಮೆಗಳನ್ನ ನಡೆಸುವ ಉದ್ದಿಮೆದಾರರಿಗೆ ಹಾಗೂ ನೌಕರರ ಗಾಯದ ಮೇಲೆ ಉಪ್ಪು ಸವರಿದಂತಾಗುತ್ತದೆ ಎಂದು ವೆಲ್ಫೇರ್ ಪಾರ್ಟಿ ತಿಳಿಸಿದ್ದಾರೆ.

ಇಂದು ಬಹುತೇಕ ರೈತರು ಸಂಪ್ರದಾಯಿಕ ಶೈಲಿಯ ಬದಲಾಗಿ ಟ್ರ್ಯಾಕ್ಟರ್, ಟಿಲ್ಲರ್ ಮುಂತಾದ ಯಾಂತ್ರಿಕ ಉಪಕರಣಗಳನ್ನು ಬಳಸಿ ಕೃಷಿ ಮಾಡುತ್ತಿದ್ದಾರೆ. ಇದು ದೇಶದೆಲ್ಲೆಡೆ ಮುಂಗಾರಿನ ಸಮಯವಾಗಿದ್ದು, ರೈತರು ಬಿತ್ತನೆಗೆ ಮುಂದಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಡೀಸೆಲ್ ಬೆಲೆ ಏರಿಕೆಯಿಂದ ಕೃಷಿ ವೆಚ್ಚವೂ ಹೆಚ್ಚಾಗಲಿದೆ. ಅಲ್ಲದೆ, ಇಂಧನ ಬೆಲೆ ಏರಿಕೆಯ ಪರಿಣಾಮವಾಗಿ ರೈತರು ತಮ್ಮ ಉತ್ಪನ್ನಗಳನ್ನು ಮಾರುಕಟ್ಟೆಗೆ ಸಾಗಿಸಲು ಹೆಚ್ಚಿನ ಬೆಲೆ ತೆರಬೇಕಾಗುತ್ತದೆ. ಇದರಿಂದ ರೈತರು ಹಾಗೂ ಕೃಷಿ ಉತ್ಪನ್ನಗಳನ್ನು ಖರೀದಿ ಮಾಡುವವರ ಜೇಬಿಗೆ ಕತ್ತರಿ ಬೀಳುತ್ತದೆ ಎಂದು ಅವರು ಹೇಳಿದ್ದಾರೆ.

ಇಂಧನ ದರ ಏರಿಕೆಯಿಂದ ಸಾರಿಗೆ ವೆಚ್ಚವೂ ಹೆಚ್ಚಾಗುವುದರಿಂದ ಎ??ಪಿಜಿ, ಅಗತ್ಯ ವಸ್ತುಗಳ ಬೆಲೆಯೂ ಏರಿಕೆಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಅಂತರ್ ರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ದಾಖಲೆ ಮಟ್ಟದಲ್ಲಿ ಕುಸಿದಿರುವ ಈ ಸಂದರ್ಭದಲ್ಲಿ ಕೇಂದ್ರ ಸರಕಾರ ಇದರ ಲಾಭವನ್ನು ದೇಶದ ಜನತೆಗೆ ವರ್ಗಾಯಿಸಬೇಕು ಹಾಗೂ ಪೆಟ್ರೋಲ್, ಡೀಸೆಲ್ ಉತ್ಪನ್ನಗಳನ್ನು ಜಿಎಸ್ಟಿ ಅಡಿಯಲ್ಲಿ ತರಬೇಕು. ೨೦೧೪ರಿಂದ ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಅಬಕಾರಿ ಸುಂಕವನ್ನು ೧೨ ಬಾರಿ ಹೆಚ್ಚಿಸಲಾಗಿದ್ದು, ಇದನ್ನು ತಕ್ಷಣವೇ ಹಿಂಪಡೆಯಬೇಕು ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾ ಸಮಿತಿ  ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ, ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾಧ್ಯಕ್ಷರಾದ ಸೈಯದ್ ಅಬ್ದುಲ್ ಬಾರಿ, ವಿಭಾಗಿಯ ಕಾರ್ಯದರ್ಶಿ ಅಜೀಜ್ ಜಾಗಿರ್ದಾರ್, ಪಲ್ಸರ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಲೀಂ ಅಹ್ಮದ್ ಚಿತಾಪುರ, ಮುಬೀನ್ ಅಹ್ಮದ್ ಸೇರಿದಂತೆ ಮುಂತಾದವರು ಇದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

16 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago