ಕಲಬುರಗಿ: ಜಿಲ್ಲೆಯ ಒಟ್ಟು 136 ಪರೀಕ್ಷಾ ಕೇಂದ್ರಗಳಲ್ಲಿ 2020ರ ಜೂನ್ 25 ರಿಂದ ಜುಲೈ 03 ರವರೆಗೆ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಗಳು ಜರುಗಲಿವೆ.
ಈ ಪರೀಕ್ಷೆಯನ್ನು ಶಾಂತಿಯುತ ಹಾಗೂ ಸುಸೂತ್ರವಾಗಿ ನಡೆಸಲು ಹಾಗೂ ನಕಲು ತಡೆಯಲು ಅನುಕೂಲವಾಗುವಂತೆ ಕಲಬುರಗಿ ಜಿಲ್ಲೆಯಲ್ಲಿನ ಎಲ್ಲ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶದಲ್ಲಿ ನಿಯೋಜಿತ ಅಧಿಕಾರಿ, ಸಿಬ್ಬಂದಿಗಳು ಹಾಗೂ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಹೊರತುಪಡಿಸಿ ಇತರೆ ವ್ಯಕ್ತಿಗಳ ಪ್ರವೇಶವನ್ನು ನಿಷೇಧಿಸಲಾಗಿದೆ ಹಾಗೂ ಈ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ.
ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಶರತ್ ಬಿ. ಅವರು 1973ರ ಸಿಆರ್.ಪಿ.ಸಿ. ಕಲಂ 144ರ ಅನ್ವಯ ಈ ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ಪೊಲೀಸ್ ಅಧಿನಿಯಮ 1963ರ ಕಲಂ-35(ಸಿ)ರ ಅನ್ವಯ ಪರೀಕ್ಷಾ ಸಮಯದಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶದಲ್ಲಿ ಪರೀಕ್ಷಾ ಕೇಂದ್ರದ ಉಪಮುಖ್ಯ ಅಧೀಕ್ಷಕರನ್ನು ಹೊರತುಪಡಿಸಿ ಪರೀಕ್ಷಾ ಕೇಂದ್ರದ ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಗೂ ಬೇರೆ ವ್ಯಕ್ತಿಗಳು, ಮೊಬೈಲ್ ಫೋನ್, ಪೇಜರ್, ಬ್ಲ್ಯೂಟೂತ್ ಹಾಗೂ ವೈರ್‍ಲೆಸ್ ಸೆಟ್‍ಗಳು ಸೇರಿದಂತೆ ಮತ್ತಿತರ ಇಲೆಕ್ಟ್ರಾನಿಕ್ಸ್ ವಸ್ತುಗಳನ್ನು ಉಪಯೋಗಿಸುವುದನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯ 200 ಮೀಟರ್ ಪ್ರದೇಶದಲ್ಲಿನ ಎಲ್ಲ ಜಿರಾಕ್ಸ್ ಮತ್ತು ಪುಸ್ತಕ ಅಂಗಡಿ ಮುಂತಾದವನ್ನು ಮುಚ್ಚುವಂತೆಯೂ ಜಿಲ್ಲಾ ದಂಡಾಧಿಕಾರಿಗಳು ಆದೇಶಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…