ಸುರಪುರ: ಯಾದಗಿರಿ ಜಿಲ್ಲಾಡಳಿತ ಕಾನೂನು ಸೇವಾ ಪ್ರಾಧಿಕಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಆರೋಗ್ಯ ಇಲಾಖೆ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನಾ ಯೋಜನಾ ಇಲಾಖೆ ಪೊಲೀಸ್ ಇಲಾಖೆ ಸಮಾಜ ಕಲ್ಯಾಣ ಇಲಾಖೆ ಮಕ್ಕಳ ಹಕ್ಕುಗಳ ರಕ್ಷಣಾ ಘಟಕ ಜಿಲ್ಲಾ ವಕೀಲರ ಸೇರಿದಂತೆ ಅನೇಕ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಗರದ ನ್ಯಾಯಾಲಯದ ಆವರಣದಲ್ಲಿ ಹಮ್ಮಿಕೊಳ್ಳಲಾದ ಎರಡು ದಿನಗಳ ಕಾಲ ನಡೆಯುವ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಹಾಗು ಕೊರೊನಾ ಕುರಿತು ಜನ ಜಾಗೃತಿ ಪ್ರಚಾರಾಂದೋಲನ ಜಾಥಾ ನಡೆಸಲಾಯಿತು.
ಜಾಥಾಗೆ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶೆ ತಯ್ಯಬಾ ಸುಲ್ತಾನ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿ ಮಾತನಾಡಿ, ಬಹಳಷ್ಟು ಕಡೆ ಅಪ್ರಾಪ್ತ ಮಕ್ಕಳು ಶಾಲೆಗೆ ಹೊಗುವುದನ್ನು ಬಿಟ್ಟು ಪಾಲಕರೊಂದಿಗೆ ದದುಡುಮೆಗೆ ಹೋಗುತ್ತಿರುವುದು ಉತ್ತಮ ಸಮಾಜದ ಬೆಳವಣಿಗೆಯಲ್ಲ ಇದು ಮುಂದೆ ಮಕ್ಕಳ ಜೀವನದ ಮೇಲೆ ದುಷ್ಟ ಪರಿಣಾಮ ಬೀರುತ್ತದೆ ಇದನ್ನು ತಪ್ಪಿಸಲು ಜನರು ಮಕ್ಕಳನ್ನು ಕೆಲಸಕ್ಕೆ ಕಳಿಸದೆ ಶಾಲೆಗಳಿಗೆ ಕಳಿಸಿ ಮಕ್ಕಳನ್ನು ವಿದ್ಯಾವಂತರನ್ನಾಗಿಸಿ ಎಂದು ತಿಳಿಸಿದರು.
ವಿಶ್ವ ಬಾಲಕಾರ್ಮಿಕ ಪದ್ಧತಿ ಎಂಬ ಈ ಅನಿಷ್ಟ ಪದ್ದತಿಯನ್ನು ಹೋಗಲಾಡಿಸಲು ಅನೇಕ ಕಾರ್ಯಕ್ರಮಗಳನ್ನು ಮಾಡಿದರು ಸಹ ಕೆಲವುಕಡೆ ಇತಂಹ ಪದ್ದತಿಯು ಮುಂದುವರೆದಿದೆ ಇದನ್ನು ಸಂಪೂರ್ಣವಾಗಿ ಹೋಗಲಾಡಿಸುವುದು ಜನರ ಕೈಯಲ್ಲಿದೆ ಜನರು ಇದರಿಂದಾಗು ಪರಿಣಾಮಗಳನ್ನು ಅರಿತು ನಡೆಯಬೇಕು ಹಾಗೆ ಇಂದು ಕರೊನಾ ವೈರಸ್ ಪ್ರಕರಣಗಳು ದಿನೆ ದಿನೆ ಹೆಚ್ಚುತ್ತಿವೆ ಸಾರ್ವಜನಿಕರು ಎಚ್ಚರದಿಂದ ಪರಸ್ಪರಂತ ಕಾಪಾಡಿಕೊಳ್ಳಬೇಕು ಹಾಗೂ ಕಡ್ಡಾಯವಾಗಿ ಮಾಸ್ಕ ಧರಿಸಬೇಕು ಬಹಳಷ್ಟುಕಡೆ ಜನರು ಈ ವೈರಸ್ ಕುರಿತು ನಿರ್ಲಕ್ಷ ವಹಿಸುವುದನ್ನು ಬಿಡಬೇಕು ಎಂದು ಸಲಹೆ ನೀಡಿದರು.
ನಂತರ ತಹಶಿಲ್ದಾರ ನಿಂಗಣ್ಣ ಬಿರಾದರ ಮಾತನಾಡಿ ೧೪ ವರ್ಷ ಒಳಗಿನ ಬಾಲಾವ್ಯಸ್ಥೆಯ ಕಾರ್ಮಿಕರನ್ನು ಕೆಲಸಕ್ಕೆ ಇಟ್ಟುಕೊಳ್ಳುವುದು ಅಪರಾಧ ಒಂದುವೇಳೆ ಇಟ್ಟುಕೊಂಡರೆ ತಪ್ಪಿತಸ್ಥರಿಗೆ ೬ ತಿಂಗಳಿಂದ ೨ ವರ್ಷದ ವರೆಗೆ ಜೈಲು ಶಿಕ್ಷೆ ಅಥವಾ ೨೦೦೦೦ ದಿಂದ ೫೦೦೦೦ ವರಗೆ ದಂಡ ವಿಧಿಸಲಾಗುತ್ತಿದೆ ಕಾರಣ ವರ್ತಕರು ಸರ್ಕಾರದ ನಿಯಮವನ್ನು ಗಮನದಲ್ಲಿಟ್ಟುಕೊಂಡು ಈ ಬಾಲಕಾರ್ಮಿಕ ಪದ್ಧತಿ ವಿರೋಧಕ್ಕೆ ಕೈಜೋಡಿಸಬೇಕು ಎಂದರು.
ಸಿವಿಲ್ ನ್ಯಾಯಾಧೀಶ ಚಿದಾನಂದ ಬಡಗೇರ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಅಮರನಾಥ ಬಿ.ಎನ್, ತಾಲೂಕು ವೈದ್ಯಾಧಿಕಾರಿ ಡಾ.ಆರ್.ವಿ.ನಾಯಕ, ಜಿಲ್ಲಾ ಬಾಲಕಾರ್ಮಿಕ ಪದ್ದತಿ ಯೋಜನಾ ನಿರ್ದೇಶಕ ರಘುವೀರ ಸಿಂಗ ಠಾಕೂರ, ಸಹಾಯಕ ಸರ್ಕಾರಿ ಅಭಿಯೋಜಕ ಮಹಾಂತೇಶ ಮಸುಳಿ, ಪಿಐ ಎಸ್.ಎಮ್.ಪಾಟೀಲ, ವಕೀಲರ ಸಂಘದ ತಾಲೂಕು ಅಧ್ಯಕ್ಷ ಮಹ್ಮದ್ ಹುಸೇನ, ಜಿಲ್ಲಾ ಬಾಲಕಾರ್ಮಿಕ ನೀರಿಕ್ಷಕ ರಾಜೇಂದ್ರ,ಕಾರ್ಮಿಕ ನಿರೀಕ್ಷಕ ಗಂಗಾಧರ, ರಾಧಾ ಜೋಶಿ ಸೇರಿದಂತೆ ಇನ್ನಿತರರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…