ಬೆಂಗಳೂರು: ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ ಖಾಲಿಯಿರುವ ಕೆಳಕಂಡ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಕಲಬುರಗಿ ಜಿಲ್ಲಾ ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ.
ಅಗ್ನಿಶಾಮಕ ಠಾಣಾಧಿಕಾರಿಗಳ 36 ಹುದ್ದೆಗಳು, ಅಗ್ನಿಶಾಮಕ ಚಾಲಕರ 227 ಹುದ್ದೆಗಳು, ಚಾಲಕ ತಂತ್ರಜ್ಞರ 82 ಹುದ್ದೆಗಳು ಹಾಗೂ ಅಗ್ನಿಶಾಮಕರ 1222 ಹುದ್ದೆಗಳು ಸೇರಿದಂತೆ ಒಟ್ಟು 1567 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು https://www.ksp.gov.in ವೆಬ್ಸೈಟ್ನಲ್ಲಿ ಆನ್ಲೈನ್ ಮೂಲಕ 2020ರ ಜುಲೈ 20 ರೊಳಗಾಗಿ ಸಲ್ಲಿಸಬೇಕು. ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಸದರಿ ವೆಬ್ಸೈಟ್ನ್ನು ಸಂಪರ್ಕಿಸಲು ಕೋರಲಾಗಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…