ಕಲಬುರಗಿ: ಮಾನವ ಹಕ್ಕುಗಳು ಹಾಗೂ ಸಾಮಾಜಿಕ ನ್ಯಾಯ ಸಂಸ್ಥೆ ಕಲಬುರಗಿ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರನ್ನಾಗಿ ಮಾಲಾ ಕಣ್ಣಿ ಹಾಗೂ ಜಿಲ್ಲಾ ಪ್ರಧಾನ್ ಕಾರ್ಯದರ್ಶಿಯನ್ನಾಗಿ ಮಾಲಾ ಎಸ್.ಐ ದಣ್ಣೂರ ಅವರನ್ನು ನೇಮಕ ಮಾಡಲಾಗಿದೆ ಎಂದು ಮಾನವ ಹಕ್ಕುಗಳು ಹಾಗೂ ಸಾಮಾಜಿಕ ನ್ಯಾಯ ಸಂಸ್ಥೆ ರಾಜ್ಯಾಧ್ಯಕ್ಷ ಪಿ. ಅಭಿ?ಕ್ ಅವರು ತಿಳಿಸಿದ್ದಾರೆ.
ಸಂಸ್ಥೆಯ ತತ್ವ ಸಿದ್ದಾಂತಕ್ಕೆ ಬದ್ಧರಾಗಿ ಕಲಬುರಗಿ ಜಿಲ್ಲೆಯಲ್ಲಿ ಮಹಿಳೆಯರು, ವಿಧ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಮಾನವ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಿ ಸಂಸ್ಥೆಯನ್ನು ಬಲಪಡಿಸುವಂತೆ ರಾಜ್ಯಾಧ್ಯಕ್ಷರು ಪಿ. ಅಭಿ?ಕ ಅವರು ತಮ್ಮ ನೇಮಕ ಆದೇಶದಲ್ಲಿ ಸೂಚಿಸಿದ್ದಾರೆ.