ಕಲಬುರಗಿ: ಜೂನ್ 20 ರಂದು ನಗರದ ಪೀರ್ ಬಂಗಾಲಿ ಮೈದಾನದಲ್ಲಿ ರೌಡಿ ಶಿಟರ್ ಹಸನ್ (22) ನನ್ನು ಬರ್ಬರವಾಗಿ ಹತ್ಯೆ ಮಾಡಿ, ಕಸದಲ್ಲಿ ಬಚ್ಚಿಟು ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಗ್ರಾಮೀಣ ಪೊಲೀಸ್ ಠಾಣೆಯ ಪಿ.ಎಸ್.ಐ ಸೋಮಲಿಂಗ ಕಿರದಳ್ಳಿ ಅವರ ನೇತೃತ್ವದ ಅಂಬಾಜಿ ಧನೆಕರ, ಮಲ್ಲಿಕಾರ್ಜುನ, ಶಿವಶರಪ್ಪಾ ಮಂಗಲಗಿ, ಪ್ರಕಾಶ ಬಾಗೆವಾಡಿ, ನಾಗೇಂದ್ರ ಸಗರ, ಶಿವಾನಂದ ಪೂಜಾರಿ, ಚನ್ನಬಸಯ್ಯಾ ಮಠಪತಿ, ಶರಣು ನಗರ ಸಿಬ್ಬಂದಿ ಕಾರ್ಯಚರಣೆ ನಡೆಸಿತು.
ಕಮಾಲ ಮುಜರತ್ ಬಡಾವಣೆಯ ನಿವಾಸಿ ಮಸ್ತಾನ ಷಾ (30), ಮಹೇಬುಬ್ ನಗರ ನಿವಾಸಿ ಮೋಹಸಿನ್ ಚಾವುಸ್(23), ಫಿರದೋಸ್ ಕಾಲೋನಿ ಯ ಮಹಮ್ಮದ್ ಸಮೀರ್ ಉರ್ಫ್ ಜಂಡು ಸಮೀರ್ (25) ಹಾಗೂ ಸಾದಿಕ್ (22) ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳು ಕೊಲೆಯಾದ ರೌಡಿಯ ಸ್ನೇಹಿತರು ಎಂದು ತಿಳಿದು ಬಂದಿದ್ದು, ಶುಕ್ರವಾರ ರಾತ್ರಿ ಹಸನನ್ನು ಕರೆದುಕೊಂಡು ಪೀರ್ ಬಂಗಾಲಿ ಮೈದಾನದಲ್ಲಿ ಕೊಲೆ ಮಾಡಿ ಶವನ್ನು ಕಸದ ತೊಟ್ಟಿಯಲ್ಲಿ ಬಚ್ಚಿಟು ಪರಾರಿಯಾಗಿದ್ದರು.
ಹಳೆಯ ವೈಷಮ್ಯ ಹಿನ್ನೆಲೆಯಲ್ಲಿ ಹಸನನ್ನು ಕೊಲೆ ಮಾಡಿರುವುದಾಗಿ ತಿಳಿದುಬಂದಿದ್ದು, ಬಂಧಿತ ಆರೋಪಿಗಳನ್ನು ಪೊಲೀಸರು ನ್ಯಾಯಾಂಗ ಬಂದನಕ್ಕೆ ಒಪ್ಪಿಸಿದ್ದಾರೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…