ಚಿತ್ತಾಪುರ: 2019-20ನೇ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ನೀಡಿ ಎಂದು ಶಾಸಕ ಪ್ರಿಯಾಂಕ್ ಖರ್ಗೆ ವೈಯಕ್ತಿಕವಾಗಿ 6,000 ಮಾಸ್ಕ್ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಶಂಕ್ರಮ್ಮ ಢವಳಗಿ ಅವರಿಗೆ ತಹಸೀಲ್ದಾರ್ ನೇತೃತ್ವದಲ್ಲಿ ನೀಡಿದರು.
ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ತಹಸೀಲ್ದಾರ್ ಉಮಾಕಾಂತ್ ಹಳ್ಳೆ ಮಾತನಾಡಿ ಕೊರೊನ್ ಸೋಂಕಿನಿಂದ ದೂರ ಇರುವುದರೊಂದಿಗೆ ಪ್ರತಿಯೊಬ್ಬ ವಿದ್ಯಾರ್ಥಿಗಳು ಮಾಸ್ಕ್ ಧರಿಸಿ ಅಂತರ ಕಾಯ್ದುಕೊಂಡು ಪರೀಕ್ಷೆ ಬರೆಯಿರಿ ಎಂದರು.
ಈ ವೇಳೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಶಂಕ್ರಮ್ಮ ಢವಳಗಿ, ತಾಲೂಕು ಪಂಚಾಯತ್ ಇಓ ಡಾ.ಬಸಲಿಂಗಪ್ಪ ಡಿಗ್ಗಿ, ಪುರಸಭೆ ಅಧಿಕಾರಿ ಮನೋಜ್ ಕುಮಾರ್ ಗುರಿಕಾರ್, ತಾಲೂಕು ಪಂಚಾಯತ್ ಅಧ್ಯಕ್ಷ ಜಗದೇವರೆಡ್ಡಿ ಪಾಟೀಲ್, ಜಿಲ್ಲಾ ಪಂಚಾಯತ್ ಸದಸ್ಯ ಶಿವಾನಂದ್ ಪಾಟೀಲ್, ಪುರಸಭೆ ಸದಸ್ಯರಾದ ಚಂದ್ರಶೇಖರ್ ಕಾಶಿ, ಶೀಲಾ ಕಾಶಿ, ಆನಂದ್ ಗುತ್ತೇದಾರ್,ಶಿವಕಾಂತ ಬೇಣ್ಣೋರಕರ್, ನಾಗಯ್ಯ ಗುತ್ತೇದಾರ್, ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ರೇವಣಸಿದ್ದಪ್ಪ ರೋಣದ, ದೇವಿಂದ್ರ ರಡ್ಡಿ, ಸಂತೋಷ್ ಕುಮಾರ್, ಸಂತೋಷ್ ಪೂಜಾರಿ, ಸೇರಿದಂತೆ ಇತರರಿದ್ದರು.