ಸುರಪುರ: ತಾಲೂಕಿನ ಖಾನಾಪುರ ಎಸ್.ಹೆಚ್ ಜಿಲ್ಲಾ ಪಂಚಾಯತ್ ಕ್ಷೇತ್ರದ ಸದಸ್ಯ ಮರ್ಲಿಂಗಪ್ಪ ಕರ್ನಾಳ ಮೇಲೆ ಯಾದಗಿರೆಯಲ್ಲಿ ದುಷ್ಟಕರ್ಮಿಗಳು ಮಾರಾಣಾಂತಿಕ ಹಲ್ಲೆ ನಡೆಸಿದ್ದಾರೆ.
ಬೆಳಿಗ್ಗೆ ಜಿಲ್ಲಾಧಿಕಾರಿ ಕಚೇರಿ ಸಮೀಪದಲ್ಲಿ ಬಿಜೆಪಿ ಪಕ್ಷದ ಮುಖಂಡರೊಬ್ಬರ ಮನೆಗೆ ಹೋಗಿ ಮರಳಿ ಬರುತ್ತಿರುವಾಗ ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.
ಬೆಳಿಗ್ಗೆ 8 ಗಂಟೆಯ ಸುಮಾರಿಗೆ ಜಿಲ್ಲಾಧಿಕಾರಿ ಕಚೇರಿ ಸಮೀಪದ ಚಿತ್ತಾಪುರ ರಸ್ತೆಯ ಮೇಲೆ ಕಾರಿನಲ್ಲಿ ಬಂದ ನಾಲ್ವರು ಹಂತಕರು ಮನಬಂದಂತೆ ಹಲ್ಲೆ ನಡೆಸಿದ್ದಾರೆ.
ತಲೆ, ಮುಖ ಮತ್ತು ಕೈಗೆ ಗಂಭೀರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದು ಸ್ಥಳಿಯರು ಬಿದ್ದಿರುವುದನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು ಹಳೆ ವೈಷಮ್ಯದ ಹಿನ್ನೆಯಲ್ಲಿ ಹಲ್ಲೆ ನಡೆಸಿರಬಹುದೆಂದು ಶಂಕಿಸಲಾಗಿದೆ.ನಿಖರವಾದ ಕಾರಣ ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಿದೆ.
ಸದ್ಯ ಕಲಬುರ್ಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…