ಕಲಬುರಗಿ: ವಿದ್ಯಾರ್ಥಿ ಜೀವನ ತಿರುವು ಪಡೆದುಕೊಳ್ಳುವ ಘಟ್ಟವಾಗಿರುವ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ವಿದ್ಯಾರ್ಥಿಗಳು ಇಂದು ಬರೆಯುತ್ತಿರುವುದರಿಂದ ಅವರಿಗೆ ಒಳ್ಳೆಯದಾಗಲಿ ಎಂದು ಜಿ.ಪಂ ಸದಸ್ಯ ಹರ್ಷಾನಂದ ಎಸ್ ಗುತ್ತೇದಾರ ಹಾರೈಸಿದ್ದಾರೆ.
ಕೊರೋನಾ ಮಹಾಮಾರಿಯ ಸಂದರ್ಭದಲ್ಲಿಯೂ ಪರೀಕ್ಷೆಗಳು ನಡೆಯುತ್ತಿವೆ. ವಿದ್ಯಾರ್ಥಿಗಳು ಏಕಾಗ್ರಚಿತ್ತದಿಂದ ಪರೀಕ್ಷೆ ಬರೆಯಿರಿ, ಅತಂಕಕ್ಕೆ ಒಳಗಾಗಬೇಡಿ ಆರೋಗ್ಯದ ದೃಷ್ಟಿಯಿಂದ ಮುಂಜಾಗೃತೆ ಕ್ರಮಗಳನ್ನು ಕೈಗೊಂಡು ಪರೀಕ್ಷಾ ಕೊಠಡಿಯನ್ನು ಪ್ರವೇಶಿಸಬೇಕು ಎಂದು ಸಲಹೆ ಮಾಡಿದ್ದಾರೆ.
ಪರಿಶ್ರಮದಿಂದ ಪ್ರಯತ್ನ ಸಿದ್ದಿಸುತ್ತದೆ ಅದಕ್ಕೆ ನಿರಂತರ ಅಭ್ಯಾಸ ಒಂದೇ ರಹದಾರಿಯಾಗಿದೆ ವಿದ್ಯಾರ್ಥಿಗಳು ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯ ಕಾಪಾಡಿಕೊಂಡು ಪರೀಕ್ಷೆ ಎದುರಿಸಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದ್ದಾರೆ.