ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ ಅವರಿಂದ ಅಭಿವೃದ್ಧಿ ಕಾಮಗಾರಿ ವೀಕ್ಷಣೆ

0
31

ಕಲಬುರಗಿ: ರಾಜ್ಯದ ನಗರಾಭಿವೃದ್ಧಿ ಸಚಿವರಾದ ಬಿ.ಎ.ಬಸವರಾಜ ಅವರು ಬುಧವಾರ ಕಲಬುರಗಿ ಮಹಾನಗರ ಪಾಲಿಕೆ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರ ವತಿಯಿಂದ ನಗರದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ವೀಕ್ಷಣೆ ಮಾಡಿದರು.

ವಿದ್ಯಾನಗರ ಸಿ.ಸಿ. ರಸ್ತೆ ಕಾಮಗಾರಿ, ಸರ್ದಾರ್ ವಲ್ಲಭಬಾಯಿ ಪಟೇಲ್ ವೃತ್ತದಲ್ಲಿ ಸ್ವಚ್ಛತೆ ಪರಿಶೀಲನೆ, ಸ್ವಸ್ತಿಕ್ ನಗರದ ಉದ್ಯಾನವನ, ಕೋಟನೂರ ಬಳಿಯ ಕುಡಿಯುವ ನೀರು ಶುದ್ಧೀಕರಣ ಘಟಕ- ಎಸ್.ಟಿ.ಪಿ.ಯನ್ನು ವೀಕ್ಷಿಸಿದರು. ಅಪ್ಪಾ ಕೆರೆಯ ಅಭಿವೃದ್ದಿಗಾಗಿ 10 ಕೋಟಿ ರೂ.ಅನುದಾನ ಬಿಡುಗಡೆಗೆ ಸರ್ಕಾರ ಅನುಮೋದನೆ ನೀಡಿದ್ದು, ಈ ಅನುದಾನದಲ್ಲಿ ಉದ್ಯಾನವನದಲ್ಲಿ ವಾಕಿಂಗ್ ಟ್ರ್ಯಾಕ್ ನಿರ್ಮಾಣ, ಸಂತರ ಪುತ್ಥಳಿ ಅನಾವರಣ ಸೇರಿದಂತೆ ಇನ್ನಿತರ ಅಭಿವೃದ್ದಿ ಕಾರ್ಯಗಳನ್ನು ನಡೆಸಲಾಗುವುದು ಎಂದು ಅವರು ಹೇಳಿದರು.

Contact Your\'s Advertisement; 9902492681

ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಪೌರಕಾರ್ಮಿಕರ ಸಮಸ್ಯೆ ಆಲಿಸಿದ ಸಚಿವರು, ಪೌರಕಾರ್ಮಿಕರ ವೇತನ, ಕೋವಿಡ್-19 ತಪಾಸಣೆ, ಸ್ವಚ್ಛತೆಯ ಕುರಿತು ಮಾಹಿತಿ ಪಡೆದರು.
ನಗರದಲ್ಲಿರುವ ಎಲ್ಲಾ ಉದ್ಯಾನವನಗಳ ನಿರ್ವಹಣೆಯನ್ನು ನಗರಾಭಿವೃದ್ಧಿ ಪ್ರಾಧಿಕಾರ ಮಾಡುತ್ತದೆ. 10 ಸಾವಿರಕ್ಕಿಂತ ಹೆಚ್ಚು ಗಿಡ-ಮರಗಳನ್ನು ನೆಡುವ ಮೂಲಕ ನಗರವನ್ನು ಹಸಿರೀಕರಣ ಮಾಡಬೇಕು. ಈ ನಿಟ್ಟಿನಲ್ಲಿ ಶೀಘ್ರವಾಗಿ ಗಿಡ ನೆಡಲು ಅಭಿಯಾನ ಕೈಗೊಳ್ಳಬೇಕೆಂದು ಅವರು ಸೂಚಿಸಿದರು.

ಈ ಸಂದರ್ಭದಲ್ಲಿ ದಕ್ಷಿಣ ಮತಕ್ಷೇತ್ರದ ದತ್ತಾತ್ರೇಯ ಪಾಟೀಲ ರೇವೂರ, ಮಹಾನಗರ ಪಾಲಿಕೆ ಆಯುಕ್ತ ರಾಹುಲ್ ತುಕಾರಾಂ ಪಾಂಡ್ವೆ, ಮಹಾನಗರ ಪಾಲಿಕೆಯ ಕಾರ್ಯನಿರ್ವಾಹಕ ಇಂಜಿನಿಯರ್ ಆರ್.ಪಿ. ಜಾಧವ ಸೇರಿದಂತೆ ಪಾಲಿಕೆ ಸದಸ್ಯರು, ಅಧಿಕಾರಿಗಳು ಮುಂತಾದವರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here