ವಾಡಿ: ಪ್ರತಿ ವರ್ಷದಂತೆ ಸ್ಥಳೀಯ ಸಂತ ಅಂಬ್ರೂಸ್ ಕಾನ್ವೆಂಟ್ ಶಾಲೆಯಲ್ಲಿ ಎರಡು ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಒಟ್ಟು ೮೦೦ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಸಾಮಾಜಿಕ ಅಂತರ ಕಾಪಾಡಲು ಕ್ಷೇತ್ರ ಶಿಕ್ಷಣಾಧಿಕಾರಿ ಶಂಕ್ರೆಮ್ಮ ಢವಳಗಿ ಇದೇ ಮೊದಲ ಸಲ ಮತ್ತೊಂದು ಖಾಸಗಿ ಶಾಲೆ ಬಳಕೆಗೆ ಮುಂದಾಗಿದ್ದು, ಪ್ರತಿಷ್ಠಿತ ಡಿಎವಿ ಪಬ್ಲಿಕ್ ಶಾಲೆಯಲ್ಲಿ ೧೫೦ ವಿದ್ಯಾರ್ಥಿಗಳು ಪ್ರತ್ಯೇಕವಾಗಿ ಪರೀಕ್ಷೆ ಬರೆಯಲು ವ್ಯವಸ್ಥೆ ಕಲ್ಪಿಸಿದ್ದಾರೆ.
ಎರಡೂ ಪರೀಕ್ಷಾ ಕೇಂದ್ರಗಳ ಉಸ್ತೂವಾರಿ ನೋಡಿಕೊಳ್ಳಲು ಬಿಆರ್‌ಪಿ ದತ್ತಪ್ಪಾ ಡೋಂಬಳೆ ಅವರನ್ನು ನೂಡಲ್ ಅಧಿಕಾರಿಯಾಗಿ ನೇಮಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಮೇಲ್ವಿಚಾರಕರಾದ ಮಹೇಶಕುಮಾರ ಬಡಿಗೇರ, ಚಂದ್ರಾಮ ಅಮನಘಡ, ಬಸಪ್ಪ ಮುಗಳಕೋಡ ಅವರು ಜೂ.೨೫ ರಂದು ಕೊಠಡಿ ಹುಡುಕಲು ವಿದ್ಯಾರ್ಥಿಗಳು ಪರದಾಡದಂತೆ ತಡೆಯಲು ಬುಧವಾರ ವಿದ್ಯಾರ್ಥಿಗಳನ್ನು ಕರೆಯಿಸಿ ಕೊಠಡಿಗಳ ಪರಿಚಯ ಮಾಡಿಸಿದರು.
ಪುರಸಭೆ ಸಿಬ್ಬಂದಿಗಳು ಪರೀಕ್ಷಾ ಕೇಂದ್ರ ಎಲ್ಲಾ ಕೊಠಡಿಗಳಿಗೆ ಸ್ಯಾನಿಟೈಸರ್ ಸಿಂಪರಣೆ ಮಾಡಿದರು. ವಿದ್ಯಾರ್ಥಿಗಳು ಪರಸ್ಪರ ಅಂತರ ಕಾಯ್ದುಕೊಂಡು ತಮ್ಮ ತಮ್ಮ ಕೋಣೆಗಳಿಗೆ ಸೇರಲು ನೆಲದಡಿ ಗುರುತುಗಳನ್ನು ಹಾಕಲಾಗಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಯನ್ನು ಥರ್ಮಲ್ ಸ್ಕ್ರೀನಿಂಗ್ ನಡೆಸಿ ಒಳ ಪ್ರವೇಶ ನೀಡಲಾಗುತ್ತದೆ. ಮಾಸ್ಕ್‌ಗಳನ್ನು ವಿತರಿಸಿ ಕೊರೊನಾ ಸುರಕ್ಷತೆ ಕಾಪಾಡಲಾಗುತ್ತಿದೆ. ನಕಲು ತಡೆಯಲು ಕೊಠಡಿಗಳಲ್ಲಿ ಸಿಸಿ ಕ್ಯಾಮೇರಾ ಅಳವಡಿಸಲಾಗಿದೆ. ಪರೀಕ್ಷಾರ್ಥಿಗಳು ಎರಡು ತಾಸು ಮೊದಲೇ ಆಗಮಿಸಲು ಸೂಚಿಸಲಾಗಿದೆ.
ಕೇಂದ್ರಗಳ ಸುತ್ತಲೂ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ ಎಂದು ನೂಡಲ್ ಅಧಿಕಾರಿ ದತ್ತಪ್ಪ ಡೋಂಬಳೆ ಪ್ರತಿಕ್ರೀಯಿಸಿದ್ದಾರೆ. ಹಿರಿಯ ಆರೋಗ್ಯ ಸಹಾಯಕಿ ಮಂಜುಳಾ, ಶಿಕ್ಷಕರಾದ ಅಶೋಕ ಚಕ್ರವರ್ತಿ, ಪ್ರಕಾಶ ಅವರು ವಿದ್ಯಾರ್ಥಿಗಳು ಅನುಸರಿಸಬೇಕಾದ ಕ್ರಮಗಳ ಕುರಿತು ಮಾಹಿತಿ ನೀಡಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…