ಶಹಾಬಾದ: ಮಾಜಿ ಕೇಂದ್ರ ಸಚಿವ,ನೂತನ ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಮತ್ತು ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಜೀವ ಬೆದರಿಕೆ ಹಾಕಿದ ದುಷ್ಕರ್ಮಿಯನ್ನು ಕೂಡಲೇ ಬಂಧಿಸಬೇಕೆಂದು ನಗರದ ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಇನಾಯತಖಾನ ಜಮಾದಾರ ಆಗ್ರಹಿಸಿದ್ದಾರೆ.
ರಾಷ್ಟ್ರದ ಅಭಿವೃದ್ಧಿಗೆ ಶ್ರಮಿಸಿದ ದೀಮಂತ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬೆದರಿಕೆ ಹಾಕಿರುವುದು ಖಂಡನೀಯ. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮುಕುಟ ಎಂದರೆ ಮಲ್ಲಿಕಾರ್ಜುನ ಖರ್ಗೆ. ಅವರಿಗೆ ಬೆದರಿಕೆ ಹಾಕಿರುವ ಬಗ್ಗೆ ದೂರು ಸಲ್ಲಿಸಿ ತಿಂಗಳಾಗುತ್ತಿದ್ದರೂ ಯಾವುದೇ ಕ್ರಮಕ್ಕೂ ಮುಂದಾಗಿಲ್ಲ. ಕನಿಷ್ಠ ಪಕ್ಷ ತನಿಖೆ ನಡೆಯುತ್ತಿರುವ ಬಗ್ಗೆಯೂ ರಾಜ್ಯ ಸರ್ಕಾರ ಗಂಬೀರವಾಗಿ ತೆಗೆದು ಕೊಂಡಿಲ್ಲ.
ರಾಜ್ಯಸಭಾ ಸದಸ್ಯರ ಮೇಲೆ ಕೊಲೆ ಬೆದರಿಕೆಯಾದರೂ ಕ್ರಮವಹಿಸಲು ಮುಂದಾಗದಿದ್ದರೇ ರಾಜ್ಯದ ಗೃಹ ಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಇರುವುದಕ್ಕೆ ಲಾಯಕ್ಕಿಲ್ಲ. ಕೂಡಲೇ ಬೊಮ್ಮಾಯಿ ರಾಜೀನಾಮೆ ನೀಡಬೇಕು. ಹನ್ನೊಂದು ಬಾರಿ ಗೆದ್ದು, ರಾಜ್ಯದಲ್ಲಿ, ಕೇಂದ್ರದಲ್ಲಿ ಸಚಿವರಾಗಿ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿದ ಖರ್ಗೆ ಅವರಿಗೆ ಹಾಗೂ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಜೀವ ಬೆದರಿಕೆ ಹಾಕುವಂತ ಹೀನ ಕೃತ್ಯಕ್ಕೆ ಮುಂದಾಗಿದ್ದಾರೆ.
ಈಬಗ್ಗೆ ಕ್ರಮ ಕೈಗೊಳ್ಳಬೇಕಾದ ರಾಜ್ಯಸರ್ಕಾರ ಸುಮ್ಮನಾಗಿದೆ. ಕೂಡಲೇ ವಿಶೇಷ ತಂಡ ರಚಿಸಿ, ದುಷ್ಕರ್ಮಿಯನ್ನು ಕೂಡಲೇ ಬಂಧಿಸಬೇಕು. ಇಲ್ಲವಾದರೆ ರಾಜ್ಯಾಧ್ಯಾದಂತ ಪ್ರತಿಭಟನೆ ಕೈಗೊಳ್ಳಲಾಗುವುದೆಂದು ಎಚ್ಚರಿಕೆ ನೀಡಿದರು.