ಮೃತ ವ್ಯಕ್ತಿಯ ಸಂಬಂಧಿಕರ ಪತ್ತೆಗೆ ಮನವಿ

0
99

ಕಲಬುರಗಿ: ಸರಡಗಿ(ಬಿ) ಗ್ರಾಮದ ಜೇವರ್ಗಿ ಮುಖ್ಯರಸ್ತೆಯಲ್ಲಿ ಭಿಕ್ಷೆ ಬೇಡುತ್ತಿದ್ದ 65-70 ವರ್ಷದ ಅಪರಿಚಿತ ವಯೋವೃದ್ಧನು ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮವಾಗಿ ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ.

ಕಲಬುರಗಿ ಸಂಚಾರಿ ಪೊಲೀಸ್ ಠಾಣೆ-01ರ ವ್ಯಾಪ್ತಿಯಲ್ಲಿ ಬರುವ ರಾಷ್ಟ್ರೀಯ ಹೆದ್ದಾರಿ-50ರ ಸರಡಗಿ(ಬಿ) ಗ್ರಾಮದ ಜೆಸ್ಕಾಂ ಘಟಕದ ಹತ್ತಿರ ಇರುವ ಶಾಮರಾವ ಕುಲಕರ್ಣಿ ಅವರ ಜಮೀನಿನ ಹತ್ತಿರ ಇರುವ ರಸ್ತೆಯಲ್ಲಿ 2020ರ ಜೂನ್ 25ರಂದು ಬೆಳಗಿನ ಜಾವ 3ರಿಂದ 4 ಗಂಟೆ ಅವಧಿಯಲ್ಲಿ ಸಂಚರಿಸುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮವಾಗಿ ವ್ಯಕ್ತಿಯು ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ ಎಂದು ಠಾಣೆಯ ಪೊಲೀಸ್ ಉಪ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Contact Your\'s Advertisement; 9902492681

ಈ ಮೃತಪಟ್ಟ ವ್ಯಕ್ತಿಯ ಹೆಸರು, ವಿಳಾಸ ಹಾಗೂ ಸಂಬಂಧಿಕರ ಪತ್ತೆಗಾಗಿ ಶವವನ್ನು ಕಲಬುರಗಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ. ಈ ಮೃತ ವ್ಯಕ್ತಿಯ ಸಂಬಂಧಿಕರು ಯಾರಾದರೂ ಇದ್ದಲ್ಲಿ ಕಲಬುರಗಿ ಸಂಚಾರಿ ಪೊಲೀಸ್ ಠಾಣೆಯ ದೂರವಾಣಿ ಸಂಖ್ಯೆ 08472-263625 ಗೆ ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here