ಕಲಬುರಗಿ: ಕೊರೋನಾ ಸೋಂಕಿನಿಂದ ಬೀದರ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಗೊತ್ತಲಗಾಂವ ಗ್ರಾಮದ 55 ವರ್ಷದ ಪುರುಷ (P-10693) ಮೃತಪಟ್ಡಿದ್ದು,ಶುಕ್ರವಾರ ವೈದ್ಯಕೀಯ ವರದಿಯಿಂದ ದೃಢವಾಗಿದೆ. ಇದರಿಂದ ಕೊರೋನಾ ಸೋಂಕಿಗೆ ಜಿಲ್ಲೆಯಲ್ಲಿ ಮೃತರಾದವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದರು.
ಜ್ವರ, ಉಸಿರಾಟ ತೊಂದರೆ ಹಾಗೂ ಅಸ್ತಮಾ ರೋಗದಿಂದ ಬಳಲುತ್ತಿದ್ದ ಇವರು ಕಳೆದ ಜೂನ್ 23 ರಂದು ಕಲಬುರಗಿ ಜಿಮ್ಸ್ ಆಸ್ಪತ್ರೆಗೆ ದಾಖಲಾಗಿ ಜೂನ್ 24 ಕ್ಕೆ ನಿಧನ ಹೊಂದಿರುತ್ತಾರೆ. ಇವರು ಬೀದರ ಪ್ರವಾಸ ಹಿನ್ನೆಲೆ ಹೊಂದಿರುತ್ತಾರೆ.
ಇವರ ಕೋವಿಡ್-19 ಪರೀಕ್ಷೆಯ ವೈದ್ಯಕೀಯ ವರದಿ ಶುಕ್ರವಾರ ಬಂದಿದ್ದು, ಸೋಂಕು ತಗಲಿರುವುದು ಖಚಿತವಾಗಿದೆ ಎಂದು ಡಿ.ಸಿ. ಶರತ್ ಬಿ. ತಿಳಿಸಿದರು.
ಜಿಲ್ಲೆಯಲ್ಲಿ ಶುಕ್ರವಾರ 42 ಜನರಿಗೆ ಕೋವಿಡ್-19 ದೃಢ ಪಟ್ಟಿದೆ. ಒಟ್ಟು 75 ಜನ ಕೊರೋನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸೋಂಕಿತ 1331 ಏರಿಕೆಯಾಗಿದ್ದು, 935 ಬಿಡುಗಡೆ 381 ಸಕ್ರಿಯ ಪೀಡಿತರು ರೋಗಿ ಇದ್ದಾರೆ.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…