ಬಿಸಿ ಬಿಸಿ ಸುದ್ದಿ

ಕಾದಂಬರಿಗಾರ್ತಿ, ನಾಡೋಜ ಗೀತಾ ನಾಗಭೂಷಣ ಇನ್ನಿಲ್ಲ

ಗೀತಾ ನಾಗಭೂಷಣ, ಕಲ್ಬುರ್ಗಿ ಜಿಲ್ಲೆಯ ಹಿಂದುಳಿದ ಸಾವಳಗಿ ಎಂಬ ಪುಟ್ಟ ಹಳ್ಳಿಯಲ್ಲಿ ಮಾರ್ಚ್ ೨೫, ೧೯೪೨ರಲ್ಲಿ ಶಾಂತಪ್ಪ, ಶರಣಮ್ಮದಂಪತಿಗಳ ಪ್ರೀತಿಯ ಮಗಳಾಗಿ ಜನಿಸಿದರು. ಮೊಘಲಾಯಿ ಪರಿಸರದ ಪ್ರಮುಖ ಲೇಖಕಿ ಎಂದು ಪ್ರಖ್ಯಾತರಾಗಿರುವ ನಾಡೋಜ ಗೀತಾ ನಾಗಭೂಷಣ, ತಮಗಿದ್ದ ಕಿತ್ತು ತಿನ್ನುವ ಬಡತನ, ಅಸಹಕಾರಕ ಪರಿಸರ, ಹೆಣ್ಣು ಮಕ್ಕಳ ನ್ನು ಶಾಲೆಗೆ ಕಳುಹಿಸದ ಸಾಮಾಜಿಕ ವ್ಯವಸ್ಥೆ ಇತ್ಯಾದಿಗಳನ್ನೆಲ್ಲಾ ದೃಢಸಂಕಲ್ಪ ಮತ್ತು ಹೋರಾಟದ ಮನೋಭಾವಗಳಿಂದ ದಾಟಿ ತಮ್ಮ ಎಡೆಬಿಡದ ಪರಿಶ್ರಮದಿಂದ ಬಿ.ಎ, ಬಿ.ಎಡ್, ಎಂ.ಎ ಪದವಿಗಳನ್ನು ಗಳಿಸಿ ಬಹುಕಾಲ ಅಧ್ಯಾಪನ ವೃತ್ತಿಯನ್ನೂ ನಡೆಸಿದವರು. ಜೊತೆಗೆ ತಮ್ಮ ಶಿಕ್ಷಕ ವೃತ್ತಿ, ಬರಹ ಪ್ರವೃತ್ತಿ ಮತ್ತು ನಡೆಗಳಿಂದ ಸಮಾಜಕ್ಕೆ ಬೆಳಕು ಕಾಣಿಸುವಲ್ಲಿ ನಿರಂತರ ಪ್ರಯತ್ನಶೀಲರಾದವರು. ಡಾ. ಗೀತಾ ನಾಗಭೂಷಣ ಅವರು ನಾಡೊಜ ಪ್ರಶಸ್ತಿ ಪಡೆದ ಮೊದಲ ಮಹಿಳಾ ಸಾಹಿತಿ. ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ಕರ್ನಾಟಕದ ಮೊದಲ ಮಹಿಳಾ ಸಾಹಿತಿ ಕೂಡಾ . ಇವರ ಬದುಕು ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಅಲ್ಲದೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಮೊದಲ ಮಹಿಳಾ ಸಾಹಿತಿ ಎಂಬ ಹೆಗ್ಗಳಿಕೆಯೂ ಇವರದೆ. ಹೀಗೆ ಹ್ಯಾಟ್ರಿಕ್ ಮಹಿಳಾ ಸಾಹಿತಿ ಎಂದು ಇವರು ಖ್ಯಾತರಾಗಿದ್ದಾರೆ. ಕೋಲ್ಕತಾದ ಭಾರತೀಯ ಭಾಷಾ ಪರಿಷತ್ ಪ್ರಶಸ್ತಿ ೨೦೧೧-೨೦೧೨ ಡಾ. ಗೀತಾ ನಾಗಭೂಷಣ ಅವರಿಗೆ ಲಭಿಸಿದೆ. ಪ್ರಶಸ್ತಿ ೧,೦೦,೦೦೦=೦೦ ಮತ್ತು ಸ್ಮರಣಿಕೆಯನ್ನೊಳಗೊಂಡಿದೆ. ಭಾರತೀಯ ಭಾಷಾ ಪರಿಷತ್ ಪ್ರಶಸ್ತಿ ಮೊದಲ ಮಹಿಳಾ ಸಾಹಿತಿ ಕೂಡಾ ಡಾ. ಗೀತಾ ನಾಗಭೂಷಣ. ಪ್ರಶಸ್ತಿ ೩೧.೦೩.೨೦೧೨ ರಂದು ಕೋಲ್ಕತ್ತಾದಲ್ಲಿ ಪ್ರದಾನ.

ಸಾಹಿತ್ಯ ಕೃತಿ
ಡಾ. ಗೀತಾ ನಾಗಭೂಷಣ ಅವರು 1968ರ ವರ್ಷದಲ್ಲಿ ಪ್ರಕಟಗೊಂಡ ‘ತಾವರೆಯ ಹೂವು ಕಾದಂಬರಿಯಿಂದ ಮೊದಲ್ಗೊಂಡು ಇತ್ತೀಚಿನ ‘ಬದುಕು ’ ಕಾದಂಬರಿಯವರೆಗೆ ಇಪ್ಪತ್ತೇಳು ಕಾದಂಬರಿಗಳನ್ನು ಪ್ರಕಟಿಸಿದ್ದಾರೆ. ಅವರ ‘ಬದುಕು’ ಕಾದಂಬರಿಗೆ 2004ರ ವರ್ಷದ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕಾರ ಸಂದಿದೆ. ಗೀತಾ ನಾಗಭೂಷಣರ ‘ಹಸಿಮಾಂಸ ಮತ್ತು ಹದ್ದುಗಳು’ ಎನ್ನುವ ಕಾದಂಬರಿಯು ಹೆಣ್ಣಿನ ಕೂಗು ಎಂಬ ಹೆಸರಿನಲ್ಲಿ ಚಲನಚಿತ್ರವಾಗಿದೆ. ಒಟ್ಟು 27 ಸ್ವತಂತ್ರ ಕಾದಂಬರಿ, 50 ಸಣ್ಣ ಕಥೆಗಳು, ಎರಡು ಸಂಕಲನ, 12 ನಾಟಕಗಳು, ಒಂದು ಸಂಪಾದನಾ ಕೃತಿ, ಒಂದು ಸಂಶೋಧನಾ ಕೃತಿ ಹೀಗೆ ಅವರ ಕನ್ನಡ ಸಾಹಿತ್ಯಕ್ಕೆ ಕೊಡುಗೆ ಹಲವಾರು.

ಸಾಹಿತ್ಯ ಸಮ್ಮೇಳನದ ಅಧ್ಯಕ್ಷಣಿಯಾಗಿ ಸಂಪಾದಿಸಿ
ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯಲ್ಲಿ ಡಾ. ಗೀತಾ ನಾಗಭೂಷಣರು ಹೇಳಿದ ಮಾತುಗಳು ಮಾರ್ಮಿಕವಾಗಿವೆ. “ವಚನಕಾರರು, ಹರಿದಾಸರು, ತತ್ವಪದಕಾರರು, ಜನಪದರು ಅಂದು ತಮ್ಮ ಸಾಹಿತ್ಯದಿಂದ ಸಾವಿರಾರು ವರ್ಷಗಳ ಉದ್ದಕ್ಕೂ ಮಾಡಿಕೊಂಡು ಬಂದ ಜನಜಾಗೃತಿ, ಶಾಂತಿ ಸೌಹಾರ್ದತೆ, ಪ್ರೀತಿ ವಾತ್ಸಲ್ಯ, ಕ್ರಾಂತಿ ಚಳುವಳಿಗಳ ಮೂಲಕ ಸುಧಾರಣೆ ಮತ್ತು ಜನಹಿತಕಾರ್ಯವನ್ನು ಇಂದಿನ ಸಾಹಿತಿಗಳೂ ಸಾಧಿಸಿ ತೋರಿಸಬೇಕಾಗಿದೆ. ಬರೀ ಶಬ್ದಾಡಂಬರದ ರಂಜನೀಯ ಸಾಹಿತ್ಯ ನಮಗೆ ಬೇಡ, ಸಾಹಿತ್ಯ ಒಂದು ಮಾನಸಿಕ ಸುಧಾರಣೆಯ ಸಾಧನ. ಅದು ಸಮಾಜದ ಅಭ್ಯುದಯಕ್ಕಾಗಿ ದುಡಿಯುವಂತಾಗಬೇಕು. ವಿಜ್ಞಾನಿಯ ತಲೆ, ಸಂತನ ಹೃದಯ ಈ ದೇಶಕ್ಕೆ ಬೇಕು. ಬುದ್ಧನ ಕರುಣೆ, ಬಸವನ ಛಲ, ಬಾಬಾ ಸಾಹೇಬರ ಸ್ವಾಭಿಮಾನ ಮತ್ತು ಗಾಂಧೀಜಿಯ ಅಹಿಂಸೆಯ ತುಡಿತ ಈ ಎಲ್ಲವನ್ನೂ ಹುರಿಗೊಳಿಸಿ ಹೊಸೆದ ಹಗ್ಗದಿಂದಲೇ ನಾವು ಸರ್ವರ ಅಭ್ಯುದಯ ಸಾಧಿಸಬಲ್ಲ ನಭೋಸ್ಪರ್ಶಿ ವ್ಯವಸ್ಥೆಗೆ ಏಣಿ ಕಟ್ಟಬೇಕಾಗಿದೆ.”

ಪ್ರಶಸ್ತಿ ಗೌರವಗಳು

ಗುಲ್ಬರ್ಗಾ ವಿಶ್ವವಿದ್ಯಾಲಯದ ಡಾಕ್ಟರೇಟ್,
ಅತ್ತಿಮಬ್ಬೆ ಪ್ರಶಸ್ತಿ,
ನಾಡೋಜ ಪ್ರಶಸ್ತಿ ಮುಂತಾದ ಹಲವಾರು ಗೌರವಗಳ ಜೊತೆಗೆ,
ಡಾ. ಗೀತಾ ನಾಗಭೂಷಣರು ಗದಗದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯನ್ನು ವಹಿಸಿದ್ದರು.
2012ರ ವರ್ಷದಲ್ಲಿ ಡಾ. ಗೀತಾನಾಗಭೂಷಣರು ಕನ್ನಡಕ್ಕೆ ಮೊಟ್ಟಮೊದಲ ಭಾರತೀಯ ಭಾಷಾ ಪರಿಷತ್ ಪ್ರಶಸ್ತಿ ತಂದುಕೊಟ್ಟಿದ್ದಾರೆ.
ಅವರ ‘ಬದುಕು’ ಕಾದಂಬರಿಗೆ 2004 ನೇ ವರ್ಷದ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕಾರ.
ಸಂಗ್ರಹ: ಮಹಿಪಾಲರೆಡ್ಡಿ ಮುನ್ನೂರ್

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

14 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago