ಕಲಬುರಗಿ: ಕೊರೊನಾ ಕರಿ ನೆರಳು ಖಾಕಿ ಪಡೆ ಮೇಲೆ ಆವರಿಸಿದ್ದು. ಜಿಲ್ಲೆಯಲ್ಲಿ ಮತ್ತೆ ಎಂಟು ಪೊಲೀಸರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ನಗರದ ರೋಜಾ ಪೊಲೀಸ್ ಠಾಣೆಯ ಮೂವರು ಪೊಲೀಸ್ ಸಿಬ್ಬಂದಿ, ಗ್ರಾಮೀಣ ಪೊಲೀಸ್ ಠಾಣೆಯಲ್ಲಿ 2, ವಿಶ್ವ ವಿದ್ಯಾಲಯ, ಫರಹತಾಬಾದ್ ಠಾಣೆಯ ಓರ್ವ ಸಿಬ್ಬಂದಿ ಹಾಗೂ ಓರ್ವ ಕೆಎಸ್‌ಆರ್‌ಪಿ ಕಾನ್ಸ್‌ಟೇಬಲ್‌ಗೆ ಕೊರೊನಾ ಸೋಂಕು ತಗುಲಿರುವುದು ಖಚಿತ ಪಟ್ಟಿದೆ. ರೋಜಾ ಮತ್ತು ಫರಹತಾಬಾದ್ ಠಾಣೆ ಸಿಬ್ಬಂದಿಗೆ ಹೋಂ ಕ್ವಾರಂಟೈನ್ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುವ ನೂರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗೆ ಮತ್ತೆ ಕೊರೊನಾ ಆತಂಕ ಶುರುವಾಗಿದೆ. ಈ ಹಿಂದೆ ಜಿಲ್ಲೆಯ ಮೂವರು ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವ ಬಗ್ಗೆ ಆರೋಗ್ಯ ಇಲಾಖೆಯ ವರದಿ ದೃಢ ಪಡಿಸಿತ್ತು.