ಕಲಬುರಗಿ: ಮಹಾಮಾರಿ ಕೋವಿಡ್-19 ಸೋಂಕು ಕೊರೊನಾ ವಾರಿಯರ್ಸ್ ಗಳಾದ ಪೊಲೀಸ್ ಸಿಬ್ಬಂದಿಗಳಿಗೆ ತಗುಲಿದ್ದು, ವೈರಸ್ ತಗುಲಿದ ಕಾನ್ಸ್ಟೇಬಲ್ ಸಿಬ್ಬಂದಿಗೆ ಆಸ್ಪತ್ರೆ ಬದಲಾಗಿ ಕ್ವಾರಂಟೈನ್ ಕೇಂದ್ರಕ್ಕೆ ಕರೆದುಕೊಂಡು ಹೋಗಲಾಗಿದೆ. ಈ ಮಧ್ಯೆ, ಅಲ್ಲಿನ ದುಃಸ್ಥಿತಿ ಕಂಡ ಕಾನ್ಸ್ಟೇಬಲ್ ತಮ್ಮ ಮೊಬೈಲ್ನಲ್ಲಿ ಆ ದೃಶ್ಯಗಳನ್ನ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಕ್ವಾರಂಟೈನ್ ಕೆಂದ್ರದ ಚಿತ್ರಣ ಮತ್ತೊಮ್ಮೆ ಬಹಿರಂಗ ಪಡಿಸಿ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.
ಫರತಾಬಾದ್ ಠಾಣೆಯ ಕಾನ್ಸ್ಟೇಬಲ್‌ರೊಬ್ಬರಿಗೆ ಸೋಂಕು ದೃಢಪಟ್ಟಿತ್ತು. ಆ್ಯಂಬುಲೆನ್ಸ್ ಚಾಲಕನ ಅಚಾತುರ್ಯದಿಂದ ಇವರನ್ನು ಕ್ವಾರಂಟೈನ್ ಕೇಂದ್ರವೊಂದಕ್ಕೆ ಕರೆದೊಯ್ದು ಬಿಟ್ಟಿದ್ದ. ಆದರೆ, ಅಲ್ಲಿನ ದುಃಸ್ಥಿತಿ ಊಟದ ಅವ್ಯವಸ್ಥೆಗೆ ಕಾನ್ಸ್ಟೇಬಲ್ ಬಾರಿ ಅಸಮಾಧಾನ ಹೊರ ಹಾಕಿರುವ ವಿಡಿಯೋ ಇದೀಗ ವೈರಲ್ ಆಗಿದೆ.
ಸ್ವಚ್ಛತೆ ಅನ್ನೋದು ಇಲ್ಲಿ ಇಲ್ಲವೇ ಇಲ್ಲ, ನೊಣ ಬಿದ್ದಿರುವ ಊಟ ತಂದು ಕೊಟ್ಟಿದ್ದಾರೆ. ಇಲ್ಲಿ ಕೊರೊನಾ ಮುಕ್ತವಾಗಿ ಹೊರಗೆ ಬರುವ ಬದಲಾಗಿ ಇಲ್ಲದ ರೋಗಗಳನ್ನು ಅಂಟಿಸಿಕೊಂಡು ಜೀವಂತ ಶವವಾಗುವ ಸ್ಥಿತಿ ಇದೆ ಎಂದು ತಮ್ಮ ಅಸಮಾಧಾನವನ್ನು ವಿಡಿಯೋ ಮೂಲಕ ತಿಳಿಸಿದ್ದಾರೆ.
ಇದೇ ವೇಳೆ ಅವರ ಅಸಮಾಧಾನವನ್ನ ವಾಟ್ಸ್ಆ್ಯಪ್ ಆಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದಾರೆ. ಜನರ ರಕ್ಷಣೆಗಾಗಿ ಶ್ರಮಿಸಿದ ನಮಗೆ ಹೀಗಾದರೆ ಜನ ಸಾಮಾನ್ಯರ ಸ್ಥಿತಿ ಹೇಗಿರಬಾರದು ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಎಲ್ಲ ಪೊಲೀಸ್ ಸಿಬ್ಬಂದಿ ಮೊದಲು ನಿಮ್ಮ ನಿಮ್ಮ ರಕ್ಷಣೆ ಮಾಡಿಕೊಳ್ಳಿ, ಜೀವ ಇದ್ದರೆ ಜೀವನ ಹೇಗಾದರೂ ಮಾಡಬಹುದು. ಸರ್ಕಾರಿ ನೌಕರಿ ಎಂದು ಕಟ್ಟು ಬಿಳಬೇಡಿ ಎಂದು ತಮ್ಮ ನೋವು ಹೊರ ಹಾಕಿದ್ದಾರೆ.
ಜಿಲ್ಲೆಯ ಕ್ವಾರಂಟೈನ್ ಸೆಂಟರ್ ಗಳಲ್ಲಿರುವ ವಿಡಿಯೋಗಳು ಕ್ವಾರಂಟೈನ್ ನಿವಾಸಿಗಳು ಬಿಡುಗಡೆ ಮಾಡುವ ಮೂಲಕ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆಯ ನಿರ್ಲಕ್ಷ್ಯವನ್ನು ಬೆತಲೆಗೊಳಿಸಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…