ಕಲಬುರಗಿ: ತೀವ್ರ ಕುತುಹಲ ಕೆರಳಿಸಿದ್ದ ಕಲಬುರಗಿ ಲೋಕಸಭಾ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಡಾ.ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ನಿಂದ ಹೊರ ಬಂದು ಬಿಜೆಪಿ ಕೈ ಹಿಡಿದಿದ್ದ, ಡಾ. ಉಮೇಶ್ ಜಾಧವ್ ಮದ್ಯೆ ನಡೆದ ನೇರಾ ನೇರಾ ಹಣಾಹಣಿಯಲ್ಲಿ ಬಿಜೆಪಿಯ ಡಾ. ಉಮೇಶ್ ಜಾಧವ್ ಅವರು 7ನೇ ಸುತ್ತಿನ ಮತ ಎಣಿಕೆಯಲ್ಲಿ ಕಾಂಗ್ರೆಸ್ ನ ಮಲ್ಲಿಕಾರ್ಜುನ ಖರ್ಗೆ ಅವರಿಗಿಂತ 62,201 ಮತಗಳ ಅಂತರದ ಮುನ್ನಡೆ ಸಾಧಿಸಿದ್ದಾರೆ.
ಸೋಲರಿಯದ ಸರದಾರ ಎಂದೆ ಖ್ಯಾತರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇದೇ ಮೊದಲ ಬಾರಿಗೆ ಸೋಲಿನ ರುಚಿ ಕಂಡಂತಾಗುತ್ತಿದೆ. ಮೊದಲ ಸುತ್ತಿನ ಮತ ಎಣಿಕೆಯಿಂದಲು ಮುನ್ನಡೆ ಸಾಧಿಸಿರುವ ಬಿಜೆಪಿ ಅಭ್ಯರ್ಥಿ ಡಾ. ಉಮೇಶ್ ಜಾಧವ್ ಅವರು ಬಹುಶ ಗೆಲವಿನ ನಗೆ ಬೀರಲಿದ್ದಾರೆ ಎಂಬ ಅಂಶಗಳು ಸ್ಪಷ್ಟವಾಗತೊಡಗಿವೆ.
ಅದರಂತೆ ಚಿಂಚೋಳಿ ಉಪ ಚುನಾವಣೆಯಲ್ಲೂ ಸಹ ಡಾ. ಉಮೇಶ್ ಜಾಧವ್ ಅವರ ಪುತ್ರ ಡಾ. ಅವಿನಾಶ್ ಜಾಧವ್ ಅವರು ಕುಡ ಗೆಲವು ಸಾಧಿಸುವ ಎಲ್ಲಾ ಲಕ್ಷಣಗಳು ಕಂಡುಬರುತ್ತಿವೆ.