ಕಲಬುರಗಿ: ಜಿಲ್ಲೆಯ ಓಲ್ಡ್ ಜೇವರ್ಗಿ ರಸ್ತೆಯ ಹತ್ತಿರ ನಡು ರಸ್ತೆಯಲ್ಲಿ ಕೆಲವು ರೌಡಿಗಳು ವಿದ್ಯಾರ್ಥಿ ಓರ್ವನು ಅಟ್ಟಾಡಿಸಿ ಮಾರಾಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ಸ್ಟೇಷನ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿನ್ನೆ ತಡ ರಾತ್ರಿ ನಡೆದಿದೆ.
ರಾಮನಗರ ನಿವಾಸಿ ಸಾಗರ (20) ಹಲ್ಲೆಗೆ ಒಳಗಾದ ಯುವಕ. ಸಾಗರ ಡಿಪ್ಲೊಮಾ ವಿದ್ಯಾರ್ಥಿ ಎಂದು ತಿಳಿದುಬಂದಿದ್ದು, ಬೈಕ್ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷುಲ್ಲಕ ಕಾರಣದಿಂದ ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಈ ಗಲಾಟೆ ಸಂಭವಿಸಿದೆ ಎಂದು ತಿಳಿದುಬಂದಿದೆ.
ರೌಡಿ ಫಹೀಮ ಮಿರ್ಜಾ ಮತ್ತು ಆತನ ಸಹಚರರು ಸೇರಿ ಮಾರಾಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ್ದಾರೆ ಎನ್ನಲಾಗುತ್ತಿದೆ. ನಡು ರಸ್ತೆಯಲ್ಲಿ ರಕ್ತದಲ್ಲಿ ಬಿದ್ದ ಸಾಗರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಕುರಿತು ಸ್ಟೇಷನ್ ಬಜಾರ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…