ಚಿಂಚೋಳಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಭರ್ಜರಿ ಜಯ

0
259

ಕಲಬುರಗಿ: ಚಿಂಚೋಳಿ ವಿಧಾನಸಭೆ ಉಪ ಚುನಾವಣೆ ಫಲಿತಾಂಶ ಬಿಜೆಪಿ ಅಭ್ಯರ್ಥಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಅಪ್ಪನ ಕ್ಷೇತ್ರವನ್ನು ತಮ್ಮ ಡಾ. ಅವಿನಾಶ ಜಾಧವ್ ತಮ್ಮ ಕೈ ವಶ ಮಾಡಿಕೊಂಡಿದ್ದು, ಇನ್ನೂ ಅಧಿಕೃತವಾಗಿ ಘೋಷಣೆ ಆಗುವುದು ಬಾಕಿ ಇದೆ.

ಇದರಿಂದಾಗಿ ಕಾಂಗ್ರೆಸ್ ಅಭ್ಯರ್ಥಿ ಸುಭಾಷ ರಾಠೋಡ್ ಅವರಿಗೆ ಭಾರಿ ಮುಖಭಂಗವಾದಂತಾಗಿದೆ. ಮತ ಎಣಿಕೆಯ ಆರಂಭದಿಂದಲು ಮುನ್ನಡೆ ಕಾಯ್ದು ಕೊಂಡು ಬಂದಿದ್ದ ಡಾ.ಅವಿನಾಶ ಜಾಧವ್ ಅವರು ಕೊನೆಗೂ ಸುಭಾಷ ರಾಠೋಡ್ ವಿರುದ್ಧ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Contact Your\'s Advertisement; 9902492681

ಮಾಧ್ಯಹ್ನ 1:40ರ ವೇಳೆಗೆ ಮತ ಎಣಿಕೆ ಕಾರ್ಯ ಮುಕ್ತಾವಾಗಿದ್ದು, ಕಾಂಗ್ರೆಸ್ ನ ಸುಭಾಷ ರಾರೋಡ್ ವಿರುದ್ಧ 7,839 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಚಿಂಚೋಳಿ ಕ್ಷೇತ್ರದ ಡಾ. ಉಮೇಶ ಜಾಧವ್ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿ ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರಿಂದ ಕ್ಷೇತ್ರಕ್ಕೆ ಉಪ ಚುನಾವಣೆ ನಡೆದಿತ್ತು. ಹೀಗಾಗಿ ಕಾಂಗ್ರೆಸ್ ಹಾಗೂ ಬಿಜೆಪಿಗೆ ಇದು ಪ್ರತಿಷ್ಠೆಯ ಕಣವಾಗಿತ್ತು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here