ಶಹಾಪುರ : ಪ್ರತಿಯೊಬ್ಬರ ಮನೆಯ ಮುಂದೆ ಮರ ಬೆಳೆಸಿ ಪರಿಸರವನ್ನು ಉಳಿಸುವ ನಿಟ್ಟಿನಲ್ಲಿ ನಾವು ನೀವೆಲ್ಲರೂ ಸೇರಿಕೊಂಡು ಜವಾಬ್ದಾರಿಯಿಂದ ಕೆಲಸ ಮಾಡಬೇಕಾಗಿದೆ ಎಂದು ಎಸ್ಡಿಎಂಸಿ ಅಧ್ಯಕ್ಷರಾದ ಗುರು ಹೊಸೂರು ಹೇಳಿದರು.
ತಾಲ್ಲೂಕಿನ ಹೊಸೂರು ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ಪರಿಸರ ದಿನಾಚರಣೆ ನಿಮಿತ್ತ ಸಸಿ ನೆಟ್ಟು ಮಾತನಾಡಿದರು,ಪ್ರಸ್ತುತ ದಿನಮಾನಗಳಲ್ಲಿ ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಪರಿಸರ ನಾಶ ಮಾಡುತ್ತಿರುವುದರಿಂದ ನಿಸರ್ಗ ಸಂಪತ್ತು ಹಾಳಾಗುತ್ತಿದೆ ಆದ್ದರಿಂದ ಪರಿಸರ ಸಂರಕ್ಷಣೆ ಮಾಡುವ ಹೊಣೆ ನಮ್ಮ ನಿಮ್ಮೆಲ್ಲರ ಕೈಯಲ್ಲಿದೆ ಎಂದು ಹೇಳಿದರು.
ಗಿಡಮರಗಳು ನೆಟ್ಟರೆ ಸಾಲದು ಅವುಗಳ ಪೊಷಣೆ ಮಾಡುವುದರ ಜೊತೆಗೆ ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸುವುದು ಶಿಕ್ಷಕರ ಕೈಯಲ್ಲಿದೆ ಎಂದು ಮಾತನಾಡಿದರು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ಕಾಶಿನಾಥ ಶಿಕ್ಷಕರಾದ ಪರಶುರಾಮ ಬಸವರಾಜ ಸಾಸನೂರ ನಾಗರಾಜ ಚಿಂತಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…