ಕಲಬುರಗಿ: ಪ್ರಸಕ್ತ 2020-21 ನೇ ಸಾಲಿಗೆ ಕಲಬುರಗಿ ಜಿಲ್ಲೆಯಲ್ಲಿ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣ ರಕ್ಷಣೆಗಾಗಿ ಧೈರ್ಯ, ಸಾಹಸ ಪ್ರದರ್ಶಿಸಿ 6 ರಿಂದ 18 ವರ್ಷದೊಳಗಿನ ಬಾಲಕರಿಗೆ ಹೊಯ್ಸಳ ಪ್ರಶಸ್ತಿ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಈ ಬಾಲಕ, ಬಾಲಕಿಯರು 2019 ರ ಆಗಸ್ಟ್ ರಿಂದ 2020 ರ ಜುಲೈ ಅವಧಿಯಲ್ಲಿ ಧೈರ್ಯ ಸಾಹಸ ಪ್ರದರ್ಶಿಸಿಸಿರಬೇಕು2002 ರ ಆಗಸ್ಟ್ 1 ರಂದು ಹಾಗೂ ನಂತರ ಜನಿಸಿದ ಮಕ್ಕಳು ಈ ಪ್ರಶಸ್ತಿಗೆ ಅರ್ಹರು. ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ 10,000ರೂ.ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ನೀಡಲಾಗುತ್ತದೆ.
ಭರ್ತಿ ಮಾಡಿದ ಅರ್ಜಿಯೊಂದಿಗೆ ಅವಶ್ಯಕ ದಾಖಲೆಗಳನ್ನು ದ್ವಿಪ್ರತಿಯಲ್ಲಿ ಲಗತ್ತಿಸಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚಂದ್ರಶೇಖರ ಪಾಟೀಲ ಕ್ರೀಡಾಂಗಣ ಎದುರುಗಡೆ (ಸರ್ಕಾರಿ ಅಂಧ ಬಾಲಕರ ಪ್ರೌಢಶಾಲೆ ಮೇಲ್ಗಡೆ) ಕಲಬುರಗಿ ಕಚೇರಿಯಲ್ಲಿ 2020 ಆಗಸ್ಟ್ 20 ರ ಸಂಜೆ5 ಗಂಟೆಯೊಳಗಾಗಿ ಅರ್ಜಿ ಸಲ್ಲಿಸಬೇಕು. ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಅರ್ಜಿ ನಮೂನೆ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯನ್ನು ಹಾಗೂ ದೂರವಾಣಿ ಸಂಖ್ಯೆ 08472-278659 ಗೆ ಸಂಪರ್ಕಿಸಲು ಕೋರಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…