ಬಿಸಿ ಬಿಸಿ ಸುದ್ದಿ

ಆನ್‌ಲೈನ್ ಶಿಕ್ಷಣ: ತಜ್ಞರ ಸ್ವಾಯತ್ತತೆ ಮೇಲೆ ಆಕ್ರಮಣ: ಎಐಡಿಎಸ್‌ಒ ಆಕ್ರೋಶ

ವಾಡಿ: ಜನರ ಪ್ರತಿರೋಧವನ್ನು ಲೆಕ್ಕಿಸದೆ ಸರಕಾರ ರಾಜ್ಯದಲ್ಲಿ ಆನ್‌ಲೈನ್ ಶಿಕ್ಷಣ ಜಾರಿಗೆ ಆದೇಶ ನೀಡಿದ್ದು, ಅಪ್ರಜಾತಾಂತ್ರಿಕ ನಿಲುವಾಗಿದೆ. ಇದು ಸರಕಾರವೇ ರಚಿಸಿರುವ ತಜ್ಞರ ಸಮಿತಿಯ ಸ್ವಾಯತ್ತತೆಯ ಮೇಲಿನ ಆಕ್ರಮಣವಾಗಿದೆ ಎಂದು ಆಲ್ ಇಂಡಿಯಾ ಡೆಮಾಕ್ರೇಟಿಕ್ ಸ್ಟೂಡೆಂಟ್ಸ್ ಆರ್ಗನೈಸೇನ್ (ಎಐಡಿಎಸ್‌ಒ) ನಗರ ಸಮಿತಿ ಅಧ್ಯಕ್ಷ ಗೌತಮ ಪರತೂರಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಂಗಳವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು ರಾಜ್ಯ ಸರಕಾರದ ಜನವಿರೋಧಿ ನೀತಿಯನ್ನು ಖಂಡಿಸಿದ್ದಾರೆ. ಶಾಲಾ ಮಕ್ಕಳಿಗೆ ಆನ್‌ಲೈನ್ ತರಗತಿ ನಡೆಸುವುದರ ಕುರಿತು ತಜ್ಞರ ಸಮಿತಿಯೊಮದು ರಚಿಸಿರುವ ಸರಕಾರ, ವರದಿ ಬರುವ ಮುಂಚೆಯೇ ತರಾತುರಿಯಲ್ಲಿ ಆನ್‌ಲೈನ್ ಬೋಧನೆಗೆ ಅನುಮತಿ ನೀಡಿರುವುದು ಆ ಸಮಿತಿಯ ಶಿಕ್ಷಣ ತಜ್ಞರಿಗೆ ಮಾಡಿದ ಅವಮಾನವಾಗಿದೆ. ಈ ಅಂತರ್ಜಾಲ ಬೋಧನೆ ಮಕ್ಕಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಪೋಷಕರೂ ಕೂಡ ಆನ್‌ಲೈನ್ ಬೋಧನೆಗೆ ವಿರೋಧ ವ್ಯಕ್ತಪಡಿಸಿ, ಖಾಸಗಿ ಶಿಕ್ಷಣ ಸಂಸ್ಥೆಗಳು ವಸೂಲಿ ಮಾಡುವ ಶುಲ್ಕದ ಬಗ್ಗೆಯೂ ಆತಂಕ ಹೊರಹಾಕಿದ್ದರು.

ಹಳ್ಳಿಗಳಲ್ಲಿ ಮೋಬಾಯಿಲ್, ಇಂಟ್‌ರ್ನೆಟ್ ಮತ್ತು ವಿದ್ಯುತ್ ಸೌಕರ್ಯಗಳ ಅನಾನುಕೂಲತೆಗಳ ಬಗ್ಗೆಯೂ ಸರಕಾರದ ಗಮನ ಸೆಳೆಯಲಾಗಿತ್ತು. ಇದರಿಂದಾಗು ಎಲ್ಲಾ ಸಮಸ್ಯೆಗಳನ್ನು ಪರಿಗಣನೆಗೆ ತೆಗೆದುಕೊಳ್ಳದೆ ಬೇಡವಾದ ಬೋಧನೆ ಪದ್ಧತಿ ಜಾರಿಗೆ ತರುತ್ತಿರುವುದು ಯಾರ ಹಿತಾಸಕ್ತಿ ಕಾಪಾಡಲು ಎಂದು ಪ್ರಶ್ನಿಸಿದ್ದಾರೆ.

ಆನ್‌ಲೈನ್ ಬೋಧನೆ ಕೈಬಿಡದಿದ್ದರೆ ರಾಜ್ಯದಾದ್ಯಂತ ಪೋಷಕರಿಂದ ಉಗ್ರ ಹೋರಾಟ ಎದುರಿಸಬೇಕಾಗುತ್ತದೆ ಎಂದು ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷ ಗೌತಮ ಪರತೂರಕರ ಹಾಗೂ ಕಾರ್ಯದರ್ಶಿ ವೆಂಕಟೇಶ ದೇವದುರ್ಗಾ ಜಂಟಿಯಾಗಿ ಎಚ್ಚರಿಕೆ ನೀಡಿದ್ದಾರೆ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

18 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago