ಕಲಬುರಗಿ: ಪ್ರಧಾನಿ ನರೇಂದ್ರ ಮೋದಿಯವರು ಮಂಗಳವಾರ ದೇಶವನ್ನುದ್ದೇಶಿಸಿ ಮಾತನಾಡುತ್ತ ಬಡವರಿಗಾಗಿ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ’ಯನ್ನು ನವೆಂಬರ್‌ವರೆಗೂ ವಿಸ್ತರಿಸಿರುವುದು ಸ್ವಾಗತಾರ್ಹ ಮತ್ತು ಅಭಿನಂದನಾರ್ಹ ನಿರ್ಧಾರವಾಗಿದೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಅಂಬಾರಾಯ ಅಷ್ಠಗಿ ಹೇಳಿದ್ದಾರೆ.
ದೀಪಾವಳಿಯವರೆಗೂ ಅಂದರೆ ನವೆಂಬರ್ 30ರವರೆಗೆ ದೇಶದ 80 ಕೋಟಿ ಬಡವರಿಗೆ ಪ್ರತಿ ತಿಂಗಳು ಉಚಿತ ಆಹಾರ ಧಾನ್ಯ ಕೊಡಲು ಮುಂದಾಗಿರುವುದು ಶ್ಲಾಘನೀಯ. ಕುಟುಂಬದ ಪ್ರತಿ ಸದಸ್ಯರಿಗೂ ತಲಾ ಐದು ಕೆಜಿ ಅಕ್ಕಿ/ಗೋಧಿ, ಒಂದು ಕೆಜಿ ಬೇಳೆ ನೀಡುವುದರಿಂದ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಬಡವರಿಗೆ ಅನುಕೂಲವಾಗಲಿದೆ ಎಂದು ಅವರು ಹೇಳಿದ್ದಾರೆ.
“ಒಂದು ರಾಷ್ಟ ಒಂದು ಪಡಿತರ ಚೀಟಿ” ಯೋಜನೆ ಜಾರಿಗೊಳಿಸವುದಾಗಿ ಪ್ರಧಾನಿ ಮೋದಿ ಹೇಳಿರುವುದನ್ನೂ ಅಂಬಾರಾಯ ಅಷ್ಠಗಿ ಸ್ವಾಗತಿಸಿದ್ದಾರೆ.