ಬಿಸಿ ಬಿಸಿ ಸುದ್ದಿ

ನಗರಸಭೆ ಅಧಿಕಾರಿಗಳ ವಿರುದ್ಧ ದಲಿತ ಸೇನೆ ಪ್ರತಿಭಟನೆ ಕ್ರಮಕ್ಕೆ ಆಗ್ರಹ

ಸುರಪುರ: ನಗರಸಭೆ ಅಧಿಕಾರಿಗಳು ಭ್ರಷ್ಟಾಚಾರ ನಡೆಸಿದ್ದಾರೆ.ಜನ ಸಾಮಾನ್ಯರು ನಗರಸಭೆಗೆ ಬಂದರೆ ಹಣವಿಲ್ಲದೆ ಯಾವ ಕೆಲಸಗಳು ಆಗುತ್ತಿಲ್ಲವೆಂದು ಆರೋಪಿಸಿ ದಲಿತ ಸೇನೆ ಕಾರ್ಯಕರ್ತರು ನಗರಸಭೆ ಮುಂದೆ ಪ್ರತಿಭಟನಾ ಧರಣಿ ನಡೆಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಧರಣಿಯ ನೇತೃತ್ವ ವಹಿಸಿದ್ದ ನಿಂಗಣ್ಣ ಗೋನಾಲ ಮಾತನಾಡಿ,ನಗರಸಭೆ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಮರೆತು ಭ್ರಷ್ಟರಾಗಿದ್ದಾರೆ.ಇಲ್ಲಿ ಹಣ ನೀಡಿದರೆ ಮಾತ್ರ ಕೆಲಸ ಇಲ್ಲವಾದರೆ ಏನು ಇಲ್ಲ ಎನ್ನುವಂತಾಗಿದೆ.ಈ ಅಧಿಕಾರಿಗಳ ವಿರುಧ್ಧ ಸರಕಾರವು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷಿಸುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.ದೀವಳಗುಡ್ಡದ ಬಡ ವ್ಯಕ್ತಿ ಮರೆಪ್ಪ ಗೊಲ್ಲರ ಎಂಬುವವರ ೨೭ ಗುಂಟೆ ಜಮೀನು ಮೋಸದಿಂದ ಬೇರೊಬ್ಬರ ಹೆಸರಿಗೆ ಖಾತೆ ಮಾಡಿ ಜಮೀನಿನಲ್ಲಿ ಕಟ್ಟಡ ನಿರ್ಮಾಣಕ್ಕೆ ಪರವಾನಿಗೆಯನ್ನೂ ನೀಡಿ ಬಡವನ ಬದುಕು ನಿರ್ನಾಮ ಮಾಡಲು ನಗರಸಭೆ ಅಧಿಕಾರಿಗಳು ನಿಂತಿದ್ದಾರೆ.ಇಂತಹ ಅಧಿಕಾರಿಗಳ ಮೇಲೆ ಸರಕಾರ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ನಂತರ ಮಾಜಿ ಪುರಸಭೆ ಅಧ್ಯಕ್ಷ ಚಂದ್ರಶೇಖರ ಜಡಿಮರಳ ಮಾತನಾಡಿ,ನಗರಸಭೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕರ್ತವ್ಯವೆಂದು ಕೆಲಸ ಮಾಡದೆ ಕೇವಲ ಹಣಕ್ಕಾಗಿ ಕೆಲಸ ಮಾಡುತ್ತಿದ್ದಾರೆ.ನಿತ್ಯವು ನೂರಾರು ಜನರು ಬಂದು ಕೆಲಸವಾಗದೆ ಹಿಡಿಶಾಪ ಹಾಕುತ್ತಿದ್ದಾರೆ.ಅಲ್ಲದೆ ನಗರದ ಜನರ ಸಮ್ಯೆಗಳ ನಿವಾರಣೆಗೆ ನಗರಸಭೆ ಯಾವ ಕೆಲಸವನ್ನು ನಿರ್ವಹಿಸದೆ ನಿರ್ಲಕ್ಷಿಸುತ್ತಿದೆ ಎಂದು ಆರೋಪಿಸಿದರು.

ಸಾಯಂಕಾಲದ ವರೆಗೂ ಧರಣಿ ನಡೆಸಿದರು.ನಂತರ ಸಂಜೆ ತಹಸೀಲ್ದಾರ ನಿಂಗಣ್ಣ ಬಿರಾದಾರ್ ಅವರು ದೀವಳಗುಡ್ಡದ ಮರೆಪ್ಪ ಎಂಬುವವರಿಗೆ ಆದ ಅನ್ಯಾಯವನ್ನು ಸರಿಪಡಿಸಿ ಅವರ ಜಮೀನಿನಲ್ಲಿ ಕಟ್ಟಡ ಪರವಾನಿಗೆ ನೀಡಿದ್ದನ್ನು ರದ್ದುಪಡಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ನಂತರ ತಹಸೀಲ್ ಸಿರಸ್ತೆದಾರ ಸೋಮನಾಥ ನಾಯಕ ಅವರ ಮೂಲಕ ಮನವಿ ಸಲ್ಲಸಿ ಧರಣಿಯನ್ನು ನಿಲ್ಲಿಸಿದರು.

ಈ ಸಂದರ್ಭದಲ್ಲಿ ನಾಗು ಗೋಗಿಕರ್ ಶಿವಣ್ಣ ನಾಗರಾಳ ಮೌನೇಶ ಹುಣಸಿಹೊಳೆ ಹೊನ್ನಪ್ಪ ಕೋನಾಳ ಭೀಮಣ್ಣ ಕರಡಕಲ್ ಬಸವರಾಜ ಹಳ್ಳಿ ಹುಲಗಪಪ್ ದೇವತ್ಕಲ್ ಸುಭಾಸ ತೇಲ್ಕರ್ ಸದಾನಂದ ಬೊಮ್ಮನಳ್ಳಿ ಜಗದೀಶ ಯಕ್ತಾಪುರ ಗ್ಯಾನಪ್ಪ ಹುಣಸಿಹೊಳೆ ಗೋಪಾಲ ಗೋಗಿಕೆರ ಸೇರಿದಂತೆ ಮರೆಪ್ಪ ದೀವಳಗುಡ್ಡ ಮತ್ತವರ ಕುಟುಂಬಸ್ಥರಿದ್ದರು.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

2 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

2 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

3 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

3 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

4 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

4 hours ago