ಸುರಪುರ: ತಾಲೂಕಿನ ದೇವಿಕೆರಾ ಗ್ರಾಮದಲ್ಲಿ ಮಹಿಳೆಯನ್ನು ಪೀಡಿಸುತ್ತಿದ್ದನೆಂದು ಆರೋಪಿಸಿ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾದ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ದೇವಿಕೆರಾ ಗ್ರಾಮದ ಯಂಕಪ್ಪ ಬೇವಿನಗಿಡ (೩೫ ವರ್ಷ) ಎಂಬ ವ್ಯಕ್ತಿಯೆ ಕೊಲೆಗೀಡಾಗಿದ್ದು.ಶಿವಪ್ಪ ಕೋಡಬೊವಿ ಎಂಬ ವ್ಯಕ್ತಿಯು ಯಂಕಪ್ಪ ಅನೇಕ ದಿನಗಳಿಂದ ತನ್ನ ಹೆಂಡತಿಯನ್ನು ಪೀಡಿಸುತ್ತಿದ್ದ.ಅನೇಕ ಬಾರಿ ಹೀಗೆಲ್ಲ ಮಾಡದಂತೆ ತಿಳಿಸಿದರು ತನ್ನ ಅದೇ ಚಾಳಿ ಮುಂದುವರೆಸಿದ್ದ ಇದರಿಂದ ಬೇಸತ್ತು ರಾತ್ರಿ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವುದಾಗಿ ಆರೋಪಿ ಶಿವಪ್ಪ ಹೇಳಿಕೆ ನೀಡಿದ್ದಾಗಿ ತಿಳಿದು ಬಂದಿದೆ.
ರಾತ್ರಿ ೧೧;೩೦ ರ ಸುಮಾರಿಗೆ ಘಟನೆ ನಡೆದಿದ್ದು ಸ್ಥಳಕ್ಕೆ ಸುರಪುರ ಪೊಲೀಸ್ ಇನ್ಸ್ಪೇಕ್ಟರ್ ಎಸ್.ಎಮ್.ಪಾಟೀಲ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಮೃತನ ಪತ್ನಿ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದು ದೂರು ದಾಖಲಿಸಿಕೊಂಡ ಪೊಲೀಸರು ಆರೋಪಿ ಶಿವಪ್ಪ ಕೋಡಬೊವಿಯನ್ನು ಬಂಧಿಸಿ,ತನಿಖೆ ಆರಂಭಿಸಿದ್ದಾರೆ.
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…
ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…