ಯಾದಗಿರಿ: ಮಹಾಮಾರಿ ಕೊರೊನಾ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಮೃತದೇಹವನ್ನು ದರದರನೆ ಎಳೆದೊಯ್ದು ಅಂತಿಮ ಸಂಸ್ಕಾರ ನಡೆಸಿರುವ ಘಟನೆ ಜಿಲ್ಲೆಯ ಹೊನಗೇರಾ ಗ್ರಾಮದಲ್ಲಿ ಮಂಗಳವಾರ ಈ ಘಟನೆ ನಡೆದಿದೆ.
ಕೋವಿಡ್ ಸೋಂಕಿತ ವ್ಯಕ್ತಿಯ ಮೃತದೇಹವನ್ನ ಆರೋಗ್ಯ ಇಲಾಖೆ ಸಿಬ್ಬಂದಿಯು ಆ್ಯಂಬುಲೆನ್ಸ್ನಿಂದ ಎಳೆದುತಂದು ಶವದ ಗುಂಡಿಯಲ್ಲಿ ಎಸೆದಿರುವ ವಿಡಿಯೋ ಇದೀಗಸಮಾಜಿಕ ಜಾಲಾತಾಣದಲ್ಲಿ ಸಖತ್ ವೈರಲ್ ಆಗಿದ್ದು, ಬಳ್ಳಾರಿ, ದಾವಣಗೆರೆ ಬಳಿಕ ಯಾದಗಿರಿಯಲ್ಲೂ ಈ ಅಮಾನವೀಯ ಪ್ರಕರಣ ಬೆಳಕಿಗೆ ಬಂದಿದೆ.
ರಾಯಚೂರಿನ ಸಿರವಾರದಲ್ಲಿ ಕೊರೊನಾ ವೈರಸ್ ಸೋಂಕಿತ ವ್ಯಕ್ತಿ ಮಗಳ ಮದುವೆ ಮರುದಿನವೇ ಮೃತಪಟ್ಟಿದ್ದರು. ಮೃತನ ಮರಣೋತ್ತರ ಪರೀಕ್ಷೆಯಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
ಹುಟ್ಟೂರು ಹೊನಗೇರಾದಲ್ಲಿ ಅಂತ್ಯ ಸಂಸ್ಕಾರ ಮಾಡಲು ಆತನ ಕುಟುಂಬ ನಿರ್ಧರಿಸಿದ್ದ ಹಿನ್ನೆಲೆ ಶವವನ್ನು ಸ್ವಗ್ರಾಮಕ್ಕೆ ತರಲಾಗಿತ್ತು. ಮಕ್ಕಳು, ಹೆಂಡತಿ ಅನುಪಸ್ಥಿತಿಯಲ್ಲೇ ನಡೆದಿದ್ದ ಅಂತಿಮ ಸಂಸ್ಕಾರದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಅಮಾನವೀಯವಾಗಿ ಸಿಬ್ಬಂದಿ ನಡೆದುಕೊಂಡಿದ್ದು, ಮಾನವ ಸಮಾಜ ತಲೆ ತಗ್ಗಿಸುವಂತಾಗಿದೆ.
ಘಟನೆ ಕುರಿತು ಜಿಲ್ಲಾಡಳಿತದಿಂದ ಸದ್ಯಯಾವುದೇ ಪ್ರತಿಕ್ರೀಯೆ ವ್ಯಕ್ತವಾಗಿಲ್ಲ. ಸಮಾಜಿಕ ಜಾಲಾತಾಣದಲ್ಲಿ ವಿಡಿಯೋ ವೀಕ್ಷಿಸಿ ನೆಟ್ಟಿಗರು ಆರೋಗ್ಯ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…