ಕಲಬುರಗಿ: ಕೋವಿಡ್-19 ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯಾದ್ಯಂತ 2020ರ ಜುಲೈ 5ರ ಭಾನುವಾರದಿಂದ ಮುಂದಿನ ಎಲ್ಲಾ ಭಾನುವಾರಗಳಂದು (2020ರ ಆಗಸ್ಟ್ 2 ರವರೆಗೆ) ಕಲಬುರಗಿ ಜಿಲ್ಲೆಯಾದ್ಯಂತ ಪೂರ್ಣದಿನದ ಲಾಕ್‍ಡೌನ್ ಹಾಗೂ ಎಲ್ಲ ತರಹದ ಮದ್ಯ ಮಾರಾಟವನ್ನು ನಿಷೇಧಿಸಿ ಕಲಬುರಗಿ ಜಿಲ್ಲಾಧಿಕಾರಿ ಶರತ್ ಬಿ. ಆದೇಶ ಹೊರಡಿಸಿದ್ದಾರೆ.
ಇದಲ್ಲದೇ ತಕ್ಷಣ ಜಾರಿಗೆ ಬರುವಂತೆ ಪ್ರತಿದಿನ ರಾತ್ರಿ 8 ರಿಂದ ಬೆಳಗಿನ 5 ಗಂಟೆಯವರೆಗೆ ಸಂಪೂರ್ಣ ಲಾಕ್‍ಡೌನ್ ಇದ್ದು, ಸಾರ್ವಜನಿಕ ಪ್ರವೇಶ ನಿಷೇಧಿಸಲಾಗಿದೆ. ಪೊಲೀಸ್ ಅಧಿಕಾರಿಗಳು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕೆಂದು ಆದೇಶ ಹೊರಡಿಸಿದ್ದಾರೆ.
ಲಾಕ್‍ಡೌನ್ ಪ್ರಯುಕ್ತ ಜಿಲ್ಲೆಯಾದ್ಯಂತ ರಾತ್ರಿ 8 ರ ನಂತರ ಅವಶ್ಯಕ ಸರಕು ಸಾಮಾಗ್ರಿ ಮತ್ತು ಸೇವೆಗಳನ್ನು ಹೊರತುಪಡಿಸಿ ಸಂಪೂರ್ಣ ಜಿಲ್ಲೆಯನ್ನು ಸ್ತಬ್ದಗೊಳಿಸಬೇಕು.
ಭಾನುವಾರ ಹೊರತುಪಡಿಸಿ ಉಳಿದ ದಿನಗಳಂದು ರಾತ್ರಿ 8ರ ನಂತರ ಎಲ್ಲ ತರಹದ ಮದ್ಯ ಮಾರಾಟವನ್ನು ಸಹ ನಿಷೇಧಿಸಿ ಡಿ.ಸಿ. ಶರತ್ ಬಿ. ಅವರು ಆದೇಶ ಹೊರಡಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…