ಬಿಸಿ ಬಿಸಿ ಸುದ್ದಿ

ಇಂಗಳಗಿ: ಕಾಂಗ್ರೆಸ್‌ನಿಂದ ಸಂವಿಧಾನ ಪೀಠಿಕೆ ಪಠಣ

ವಾಡಿ: ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ ಡಿ.ಕೆ.ಶಿವುಕುಮಾರ ಅವರ ಆನ್‌ಲೈನ್ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಇಂಗಳಗಿ ಗ್ರಾಮದ ಕಾಂಗ್ರೆಸ್ ಮುಖಂಡರು, ಗ್ರಾಪಂ ಸದಸ್ಯರು ಹಾಗೂ ಕಾರ್ಯಕರ್ತರು, ಸಂವಿಧಾನ ಪೀಠಿಕೆ ಪಠಣ ಮಾಡುವ ಮೂಲಕ ಪಕ್ಷ ಸಂಘಟನೆಯ ಶಪತ ಮಾಡಿದರು.

ತಾಪಂ ಸದಸ್ಯ, ಕಾಂಗ್ರೆಸ್ ಹಿರಿಯ ಮುಖಂಡ ಅಣ್ಣಾರಾಯಗೌಡ ಪಾಟೀಲ ಅವರ ಮನೆಯಂಗಳದಲ್ಲಿ ಟಿವಿ ಮೂಲಕ ಡಿಕೆಶಿ ಅವರ ಅಧಿಕಾರ ಸ್ವೀಕಾರ ಸಮಾರಂಭದ ನೇರ ದೃಶ್ಯಾವಳಿಗಳನ್ನು ವೀಕ್ಷಿಸಿ ಕಣ್ತುಂಬಿಕೊಂಡ ಕೈ ಕಾರ್ಯಕರ್ತರು, ಉತ್ಸಾಹಿ ನಾಯಕನಿಂದ ರಾಜ್ಯದಲ್ಲಿ ಪಕ್ಷ ಮತ್ತಷ್ಟು ಬಲಗೊಂಡು ಪುನಃ ಅಧಿಕಾರಕ್ಕೆ ಬರಲಿದೆ ಎಂಬ ಆತ್ಮವಿಶ್ವಾಸ ವ್ಯಕ್ತಪಡಿಸಿದರು. ಇದಕ್ಕೂ ಮೊದಲು ಗಡಿಯಲ್ಲಿ ಚೀನಾ ಶತ್ರು ಸೈನಿಕರ ವಿರುದ್ಧ ಹೋರಾಡಿ ಹುತಾತ್ಮರಾದ ಭಾರತೀಯ ಸೈನಿಕರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ರಾಷ್ಟ್ರಗೀತೆ ಮತ್ತು ಪ್ರತಿಜ್ಞಾವಿಧಿ ಬೋಧನೆ ನಂತರ ಸಂವಿಧಾನ ಪೀಠಿಕೆಯನ್ನು ಸಾಮೂಹಿಕವಾಗಿ ಓದಲಾಯಿತು.

ಕಾಂಗ್ರೆಸ್ ಹಿರಿಯ ಮುಖಂಡರಾದ ರುದ್ರುಗೌಡ ಪಾಟೀಲ, ಬಸವರಾಜ ಸ್ಥಾವರಮಠ, ಮರಬಸಯ್ಯಸ್ವಾಮಿ, ಸುಭಾಷ ಯಾಮೇರ, ಮಲ್ಲಿಕಾರ್ಜುನ ಯಾದಗಿರಿ, ಮುಕ್ರುಂ ಪಟೇಲ, ಗೌಸ್ ದುದ್ದನಿ, ಡಾ.ಎಂ.ಎಂ.ಘಫಾರ್, ವಾಹೀದ್ ಪಟೇಲ, ಶೇರಲಿ ದುದ್ದನಿ, ಬಸವರಾಜ ನಾಟೀಕಾರ, ಅಶೋಕ ಹಳಿಮನಿ, ನಾಗಪ್ಪ ರಾವೂರ, ವೆಂಕಟಗಿರಿ ಕಟ್ಟಿಮನಿ, ನಾಗಪ್ಪ ಸಂಕನ, ಚಂದ್ರು ಬಳವಡಗಿ, ಬಾಷುಮಿಯ್ಯಾ ಸೌಧಾಗರ, ಗುಡು ಅವಂಟಿ, ನಿಶಾಂತ ಪಾಟೀಲ ಸೇರಿದಂತೆ ನೂರಾರು ಜನ ಪಾಲ್ಗೊಂಡಿದ್ದರು.

ವಾಡಿ ಸಾಹೇಬ ಫಂಕ್ಷನ್ ಹಾಲ್‌ನಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಡಿಕೆಶಿ ಪದಗ್ರಹಣ ವೀಕ್ಷಣಾ ಸಮಾರಂಭ ಏರ್ಪಡಿಸಲಾಗಿತ್ತು. ಹಳಕರ್ಟಿ, ಕಮರವಾಡಿ, ರಾವೂರ, ಲಾಡ್ಲಾಪುರ, ಸನ್ನತಿ, ಕೊಲ್ಲೂರ, ಕಡಬೂರ, ಶಾಂಪುರಹಳ್ಳಿ, ಯಾಗಾಪುರ ಗ್ರಾಪಂ ವಲಯಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂವೀಧಾನ ಪೀಠಿಕೆ ಓದಿದರು.

emedialine

Recent Posts

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

54 mins ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

2 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

5 hours ago

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

6 hours ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

20 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

20 hours ago