ಕಲಬುರಗಿ: ಕಲಬುರಗಿ ಲೋಕಸಭೆ ಮತಕ್ಷೇತ್ರದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಸೋಲು ಅನುಭವಿಸಿದ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಅಫಜಲಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಾಂತೇಶ ಪಾಟೀಲ ರಾಜೀನಾಮೆ ನೀಡಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಖರ್ಗೆ ಪರ ಕ್ಷೇತ್ರಾದ್ಯಂತ ಶಾಸಕ ಎಂ.ವೈ. ಪಾಟೀಲ ಜತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹಗಲಿರುಳು ಶ್ರಮಿಸಿದ್ದೇವು. ಆದರೆ ಮತದಾರ ಬಾಂಧವರು ನಮ್ಮ ವಿರುದ್ಧ ತೀರ್ಪು ನೀಡಿದ್ದಾರೆ.
ಹೀಗಾಗಿ ನೈತಿಕ ಹೊಣೆ ಹೊತ್ತು ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ದಿನೇಶ ಗುಂಡೂರಾವ ಹಾಗೂ ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ ಅವರಿಗೆ ಪತ್ರ ಬರೆದು ತಮ್ಮ ರಾಜೀನಾಮೆ ಅಂಗೀಕರಿಸಬೇಕು ಎಂದು ಮನವಿ ಮಾಡಿದ್ದಾರೆ.