ಬಿಸಿ ಬಿಸಿ ಸುದ್ದಿ

ಕರೊನಾ ಪಾಸಿಟಿವ್- ಮಜ್ಜಿದ್ ವೃತ್ತ ಸೀಲ್ ಡೌನ್

ಶಹಾಬಾದ:ನಗರದ ಮಜ್ಜಿದ್ ಚೌಕನಲ್ಲಿ ಮೃತ ವ್ಯಕ್ತಿಯ ಅಂತ್ಯ ಸಂಸ್ಕಾರದ ನಂತರ ಕರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ರವಿವಾರ ಮಜ್ಜಿದ್ ವೃತ್ತದ ಸುತ್ತಮುತ್ತಲಿನ ಪ್ರದೇಶವನ್ನು ಸಂಪೂರ್ಣ ಸೀಲ್ ಡೌನ್ ಮಾಡಲಾಗಿದೆ.

ಒಂದು ವಾರದ ಹಿಂದಷ್ಟೇ ಮಜ್ಜಿದ್ ಚೌಕ್ ನ ವಾಸವಾಗಿರುವ 65 ವರ್ಷದ ನಿವೃತ್ತ ಉಪನ್ಯಾಸಕನಲ್ಲಿ ಕೊರೊನಾ ಇರುವ ಶಂಕೆ ವ್ಯಕ್ತವಾಗಿದ್ದರಿಂದ ತಾಲೂಕಾಢಳಿತ ಮೃತ ವ್ಯಕ್ತಿಯ ದೇಹದ ಸ್ಯಾಂಪಲ್ ತೆಗೆದುಕೊಂಡು ಪರೀಕ್ಷೆಗಾಗಿ ಕಳಿಸಿಕೊಡಲಾಗಿತ್ತು. ಎರಡು ದಿನಗಳ ನಂತರ ಕಳೆದ ಗುರುವಾರ ವ್ಯಕ್ತಿ ಮೃತಪಟ್ಟಿದ್ದಾನೆ. ಸುದ್ದಿ ತಿಳಿದ ತಕ್ಷಣವೇ ಪರೀಕ್ಷೆಯ ವರದಿ ಬಗ್ಗೆ ವಿಚಾರಿಸಿದ್ದಾರೆ.ಆದರೆ ವರದಿ ಬರು ತಡವಾಗುತ್ತದೆ ಎಂದು ತಿಳಿದಾಗ ಮುನ್ನೆಚ್ಚರಿಕೆ ಕ್ರಮವಾಗಿ ಅವರ ದೇಹವನ್ನು ಕರೊನಾ ಪಾಸಿಟಿವ್ ಹೊಂದಿರುವ ವ್ಯಕ್ತಿಯ ದೇಹವನ್ನು ಅಂತ್ಯ ಸಂಸ್ಕಾರ ಮಾಡುವ ಹಾಗೇನೆ ಮಾಡಲಾಗಿದೆ. ಆದರೆ ರವಿವಾರ ಆ ವ್ಯಕ್ತಿಗೆ ಕರೊನಾ ಇರುವ ಬಗ್ಗೆ ಪ್ರಯೋಗಾಲಯದಿಂದ ವರದಿ ಬಂದಿದೆ.ತಕ್ಷಣವೇ ತಹಸೀಲ್ದಾರ ಸುರೇಶ ವರ್ಮಾ, ನಗರಸಭೆ ಪೌರಾಯುಕ್ತ ಕೆ.ಗುರಲಿಂಗಪ್ಪ ಹಾಗೂ ಸಿಪಿಐ ಅಮರೇಶ.ಬಿ ಕೂಡಿಕೊಂಡು ಬೆಳಿಗ್ಗೆ ಸೊಂಕಿನಿಂದ ಮೃತಪಟ್ಟ ವ್ಯಕ್ತಿಯ ಮನೆಯ ಸುತ್ತಮುತ್ತಲಿನ ಪ್ರದೇಶವನ್ನು ಸಂಪೂರ್ಣವಾಗಿ ಸ್ವಚ್ಛತೆಗೊಳಿಸಿ, ಸ್ಯಾನಿಟೈಜರ್ ಮಾಡಿಸಿದ್ದಾರೆ.ಅಲ್ಲದೇ ಆ ಪ್ರದೇಶವನ್ನು ಸಂಪೂರ್ಣ ಸೀಲ್ ಡೌನ್ ಮಾಡಲಾಗಿದೆ. ಸೊಂಕಿತ್ ವ್ಯಕ್ತಿಯ ಕುಟುಂಬ ವರ್ಗದವರು ಹಾಗೂ ಸೊಂಕಿತ ವ್ಯಕ್ತಿಯ ಜತೆ ಸಂಪರ್ಕ ಹೊಂದಿದವರ ಮಾಹಿತಿ ಕಲೆ ಹಾಕುತ್ತಿದೆ.ಇದರಿಂದ ನಗರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.ಆರೋಗ್ಯ ನಿರೀಕ್ಷಕರಾದ ಶಿವರಾಜಕುಮಾರ,ಶರಣು, ರಾಜೇಶ, ಸಿಬ್ಬಂದಿಗಳಾದ ಉಣೇಶ, ಅನಿಲ ಇತರರು ಇದ್ದರು.

ನಗರದಲ್ಲಿ ದಿನದಿಂದ ದಿನಕ್ಕೆ ಕರೊನಾ ಪಾಸಿಟಿವ್ ಸಂಖ್ಯೆ ಹೆಚ್ಚಾಗುತ್ತಿದ್ದು, ಅದನ್ನು ನಿಯಂತ್ರಣ ಮಾಡಲು ತಾಲೂಕಾಢಳಿತ ಸಾಕಷ್ಟು ಪ್ರಯತ್ನ ಮಾಡುತ್ತಿದೆ.ಎಷ್ಟೇ ಕ್ರಮ ಕೈಗೊಂಡರು ಸಾರ್ವಜನಿಕರ ಸಹಕಾರ ಮಾತ್ರ ಸಿಗುತ್ತಿಲ್ಲ.ಅಲ್ಲದೇ ಜನರು ಮಾಸ್ಕ್  ಹಾಕಿಕೊಳ್ಳದೇ ಓಡಾಡುತ್ತಿರುವುದು ಕಂಡು ಬರುತ್ತಿದೆ.ಕರೊನಾ ನಿಯಂತ್ರಣ ಮಾಡಲು ಸದ್ಯ ಕಠಿಣ ಕ್ರಮ ತೆಗೆದುಕೊಳ್ಳುವ ನಿರ್ಧಾರ ಮಾಡಿದ್ದೆವೆ-ಸುರೇಶ ವರ್ಮಾ ತಹಸೀಲ್ದಾರ ಶಹಾಬಾದ.

ಕರೊನಾ ಸೊಂಕು ಹರಡುತ್ತಿದ್ದು, ನಗರದ ಸಾರ್ವಜನಿಕರು ಆದಷ್ಟು ಮಾಸ್ಕ್ ಧರಿಸಿ.ಸಾಮಾಜಿಕ ಅಂತರ ಕಾಪಾಡಿಕೊಳ್ಳಿ.ಅನಿವಾರ್ಯ ಸಂದರ್ಭದಲ್ಲಿ ಮಾತ್ರ ಹೊರಗೆ ಬನ್ನಿ.ಅಲ್ಲದೇ ನಗರದಲ್ಲಿ ಅಗ್ನಿಶಾಮಕ ದಳದಿಂದ ಸ್ಯಾನಿಟೈಜರ್ ಮಾಡಿಸಲಾಗಿದೆ.ಅಲ್ಲದೇ ನಗರದ ಸ್ವಚ್ಛತೆ ಕಾಪಾಡುವುದು ನಮ್ಮದು.ಸಹಕಾರ ನೀಡುವ ಜವಾಬ್ದಾರಿ ನಿಮ್ಮದು-ಕೆ.ಗುರಲಿಂಗಪ್ಪ ಪೌರಾಯುಕ್ತ ನಗರಸಭೆ ಶಹಾಬಾದ.

emedia line

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

5 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

15 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

15 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

15 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago