ಶಹಾಬಾದ:ತಾಲೂಕಿನಲ್ಲಿ ದಿನದಿಂದ ದಿನಕ್ಕೆ ಕರೊನಾ ಸೊಂಕು ಹೆಚ್ಚಾಗುತ್ತಿದ್ದು, ಒಂದೇ ದಿನ ಸುಮಾರು 10 ಜನರಿಗೆ ಕರೊನಾ ಸೊಂಕು ಪತ್ತೆಯಾಗಿದ್ದು, ಒಬ್ಬ ಸೊಂಕಿತ ವ್ಯಕ್ತಿ ಮೃತಪಟ್ಟಿದ್ದರಿಂದ ಸಾರ್ವಜನಿಕರಲ್ಲಿ ಆತಂಕದ ಮನೆಮಾಡಿದೆ.
ಜಿಲ್ಲಾ ಸಶಸ್ತ್ರ ಪೊಲೀಸ್ ಪಡೆಯ 4 ಜನ ಪೊಲೀಸರಿಗೆ ಸೊಂಕು ದೃಢಪಟ್ಟಿದೆ. ಭಂಕೂರ ಗ್ರಾಮದ ನಾಲ್ಕು ಜನರಿಗೆ ಸೊಂಕು ತಗುಲಿದೆ. ಬೆಂಡಿಬಜಾರನ ಒಬ್ಬರಿಗೆ ಪಾಸಿಟಿವ್ ಬಂದರೆ, ಹಳೆಶಹಾಬಾದನ ಒಬ್ಬ ವ್ಯಕ್ತಿಗೆ ಕರೊನಾ ಸೊಂಕು ಕಂಡುಬಂದಿದೆ.ಇವರೆಲ್ಲರನ್ನೂ ಹೆಚ್ಚಿನ ಚಿಕಿತ್ಸೆಗೆ ಕಲಬುರಗಿಗೆ ಕಳಿಸಲಾಗಿದೆ. ಜಿಲ್ಲಾ ಸಶಸ್ತ್ರ ಪೊಲೀಸ್ ಪಡೆಯ ಇಬ್ಬರನ್ನು ಹೋಮ್ ಕ್ವಾರಂಟೈನ್ ಇಡಲಾಗಿದೆ.ಅಲ್ಲದೇ ಇವರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಲು ಮುಂದಾಗಿದ್ದಾರೆ.ಭಂಕೂರ ಗ್ರಾಮದಲ್ಲಿ ಎಲ್ಲಿಲ್ಲದ ಭಯ ಆವರಿಸಿದೆ. ತಾಲೂಕಿನಲ್ಲಿಯೇ ಗ್ರಾಮೀಣ ಭಾಗದಲ್ಲಿ ಒಂದೇ ದಿನದಲ್ಲಿ ಹೆಚ್ಚು ಕೇಸ್ ಪತ್ತೆಯಾಗಿದ್ದು ಆತಂಕ ಸೃಷ್ಠಿಸಿದೆ.
ಜನ ಪೊಲೀಸರೆಂದರೆ ಭಯಪಡುತ್ತಿದ್ದರು.ಆದರೆ ಇಂದು ಪೊಲೀಸರು ಭಯಪಡುವಂತ ವಾತಾವರಣ ಕರೊನಾ ನಿರ್ಮಾಣ ಮಾಡಿದೆ. ತಾಲೂಕಾಢಳಿತ ಸೊಂಕಿತ ವ್ಯಕ್ತಿಯ ಮನೆಯ ಸುತ್ತಮುತ್ತಲಿನ ಪ್ರದೇಶವನ್ನು ಸೀಲ್ ಡೌನ್ ಮಾಡಿದ್ದಾರೆ.ಸಾರ್ವಜನಿಕರು ಆದಷ್ಟು ಸಾಮಾಜಿಕ ಅಂತರ ಕಾಪಾಡಿಕೊಳ್ಳಿ.ಮಾಸ್ಕ್ ಧರಿಸಿ, ಸ್ಯಾನಿಟೈಜರ್ ಬಳಸಿ.ಕುಡಿಯಲು ದಿನಕ್ಕೆ ಮೂರು ಬಾರಿ ಬಿಸಿ ನೀರು ಬಳಕೆ ಮಾಡಿ.ಇದರಿಂದ ರೋಗವನ್ನು ತಡೆಗಟ್ಟಲು ಸಾಧ್ಯ.ಅಲ್ಲದೇ ಸರ್ಕಾರ ನಿಯಮಗಳನ್ನು ಪಾಲನೆ ಮಾಡಿ ಎಂದು ತಹಸೀಲ್ದಾರ ಸುರೇಶ ವರ್ಮಾ ಮನವಿ ಮಾಡಿದ್ದಾರೆ.ಈ ಸಂದರ್ಭದಲ್ಲಿ ಪೌರಾಯುಕ್ತ ಕೆ.ಗುರಲಿಂಗಪ್ಪ, ಪಿಐ ಅಮರೇಶ.ಬಿ, ಆರೋಗ್ಯ ನಿರೀಕ್ಷಕ ಶಿವರಾಜಕುಮಾರ, ನೈರ್ಮಲ್ಯ ನಿರೀಕ್ಷಕರಾದ ಶರಣು, ರಾಜೇಶ, ಉಣೇಶ, ಅನೀಲಕುಮಾರ, ನಾಗೇಂದ್ರ ತಳವಾರ, ಹುಸೇನ ಪಾಷಾ, ಸೋಮು ರಾಠೋಡ ಇತರರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…