ಕಲಬುರಗಿ: ಕೊರೋನಾ ಸೋಂಕಿನಿಂದ ಜಿಲ್ಲೆಯಲ್ಲಿ ಮತ್ತಿಬ್ಬರು ವೃದ್ಧರು ಮೃತಪಟ್ಟಿರುವುದು ರವಿವಾರದ ಕೋವಿಡ್-19 ಬುಲೆಟಿನ್ ವರದಿಯಿಂದ ದೃಢವಾಗಿದೆ. ಇದರಿಂದ ಕೊರೋನಾ ಸೋಂಕಿಗೆ ಜಿಲ್ಲೆಯಲ್ಲಿ ಮೃತರಾದವರ ಸಂಖ್ಯೆ 27ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದರು.
ILI ಹಿನ್ನೆಲೆಯೊಂದಿಗೆ ಅಧಿಕ ರಕ್ತದೊತ್ತಡ, ಮಧುಮೇಹ ಹಾಗೂ ಹೃದ್ರೋಗದಿಂದ ಬಳಲುತ್ತಿದ್ದ ಕಲಬುರಗಿ ನಗರದ ಅನ್ನಪೂರ್ಣ ಕ್ರಾಸ್ ಪ್ರದೇಶದ 69 ವರ್ಷದ ವೃದ್ಧ (P-21318) ಜು.3 ರಂದು ಕಲಬುರಗಿ ಜಿಮ್ಸ್ ಆಸ್ಪತ್ರೆಗೆ ದಾಖಲಾಗಿ ಜು.4 ರಂದು ನಿಧನ ಹೊಂದಿರುತ್ತಾರೆ.
ILI ಹಿನ್ನೆಲೆಯೊಂದಿಗೆ ತೀವ್ರ ಜ್ವರ, ಕೆಮ್ಮು ಹಾಗೂ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಶಹಾಬಾದ ಪಟ್ಟಣದ ಮಸ್ಜಿದ್ ಚೌಕ್ ಪ್ರದೇಶದ 66 ವರ್ಷದ ವೃದ್ಧ (P-23288) ಜು.3 ರಂದು ಅಸ್ಪತ್ರೆಗೆ ದಾಖಲಾಗುವ ಮುನ್ನವೆ ನಿಧನ ಹೊಂದಿದ್ದು, ರವಿವಾರ ಕೊರೋನಾ ಸೋಂಕು ತಗುಲಿರುವುದು ವೈದ್ಯಕೀಯ ವರದಿಯಿಂದ ದೃಢವಾಗಿದೆ ಎಂದು ಡಿ.ಸಿ. ಶರತ್ ಬಿ. ತಿಳಿಸಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…