ಕಲಬುರಗಿ: ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಸಭೆ, ಸಮಾರಂಭ ಹಾಗೂ ಜಾತ್ರೆಗಳಿಗೆ ನಿರ್ಬಂಧ ಹೇರಿರುವ ಹಿನ್ನೆಲೆಯಲ್ಲಿ ಇಲ್ಲಿನ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದ ಶ್ರೀ ಪಿಲಕ್ಕಮ್ಮಾ ದೇವಿಯ ಜಾತ್ರೆ ರದ್ದುಪಡಿಸಲಾಗಿದೆ ಎಂದು ದೇವಸ್ಥಾನದ ಸಮಿತಿ ಸ್ಪಷ್ಟಪಡಿಸಿದೆ.
ದೇವಸ್ಥಾನದಲ್ಲಿ ಆವರಣದಲ್ಲಿ ವಾಡಿ ಪೊಲೀಸ್ ಠಾಣೆ ಪಿಎಸ್ಐ ವಿಜಯಕುಮಾರ್ ಬಾವಗಿ ಅವರ ನೇತೃತ್ವದಲ್ಲಿ ನಡೆದ ಶಾಂತಿ ಸಭೆಯಲ್ಲಿ ಜಾತ್ರೆ ನಡೆಸದಂತೆ ದೇವಸ್ಥಾನದ ಸಮಿತಿಗೆ ಸೂಚಿಸಿದ್ದಾರೆ.
ಸರಕಾರ ಮತ್ತು ಪೊಲೀಸ್ ಅಧಿಕಾರಿಗಳ ಮನವಿಗೆ ಸ್ಪಂದಿಸಿದ ಸಮಿತಿ ಸದಸ್ಯರು ಈ ಬಾರಿಯ ಜಾತ್ರಾ ಮಹೋತ್ಸವನ್ನು ಕೇವಲ ಪೂಜೆಗೆ ಸೀಮಿತಗೊಳಿಸುವುದಾಗಿ ಒಪ್ಪಿಕೊಂಡಿದ್ದಾರೆಂದು ಪಿಎಸ್ಐ ಬಾವಗಿ ತಿಳಿಸಿದ್ದಾರೆ.
ಪ್ರತಿವರ್ಷ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ ಜಾತ್ರಾಮಹೋತ್ಸವವನ್ನು ಕೊರೊನಾ ಕಾರಣದಿಂದಾಗಿ ಸರಳವಾಗಿ ಆಚರಿಸಲು ಸಮಿತಿ ನಿರ್ಧರಿಸಿದೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…