ಪ್ರಜಾಕೀಯ

ಕಲಬುರಗಿ ಲೋಕಸಭಾ ಮತಕ್ಷೇತ್ರದಲ್ಲಿ ಮತದಾರ ರ ಸಂಖ್ಯೆ ಎಷ್ಟು ಗೊತ್ತಾ..?

ಕಲಬುರಗಿ:  2019ರ ಚುನಾವಣಾ ಕಾವು ಏರತೊಡಗಿದೆ. ಬೇಸಿಗೆಯ ಉರಿ ಬಿಸಿಲನ್ನು ಲೆಕ್ಕಿಸದೆ ರಾಷ್ಟ್ರೀಯಪಕ್ಷಗಳಾದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಪಕ್ಷ ಹಾಗೂ ಪಕ್ಷೇತರ ಅಭ್ಯರ್ಥಿಗಳು ಮತದಾರರನ್ನು ತಮ್ಮತ್ತ ಸೆಳೆಯಲು ಹರಸಾಹಸ ಪಡುತ್ತಿದ್ದಾರೆ.

ಲೋಕಸಭಾ ಚುನಾವಣೆ ಒಂದು ದೇಶದ ಭವಿಷ್ಯವನ್ನು ನಿರ್ಧರಿಸಲಿದೆ ಎಂಬುದರಲ್ಲಿ ಎರಡು ಮಾತಿಲ್ಲ. ಇಂತಹ ಅತಿ ಪ್ರಾಮುಖ್ಯತೆಯನ್ನು ಕಲಬುರಗಿ ಲೋಕಸಭಾ (ಮೀಸಲು) ಮತಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ 2019ರ ಏಪ್ರಿಲ್ 23ರಂದು ಮತದಾನ ನಡೆಯಲಿದೆ. ಕಲಬುರಗಿ ಲೋಕಸಭಾ (ಮೀಸಲು) ಮತ ಕ್ಷೇತ್ರದಲ್ಲಿ ಒಟ್ಟು 19,20,977 ಮತದಾರರು ಮತ ಚಲಾಯಿಸುವ ಹಕ್ಕು ಹೊಂದಿದ್ದಾರೆ. 9,68,242 ಪುರುಷ ಮತ್ತು 9,52,735 ಮಹಿಳಾ ಮತದಾರರು ಸೇರಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಆರ್. ವೆಂಕಟೇಶಕುಮಾರ ತಿಳಿಸಿದ್ದಾರೆ.

ವಿಧಾನಸಭಾ ಜಿಲ್ಲಾವಾರು ವಿವರ

ಅಫಜಲಪುರ ವಿಧಾನಸಭಾ ಕ್ಷೇತ್ರ: 1,12,986 ಪುರುಷ, 1,07,141 ಮಹಿಳೆ ಸೇರಿದಂತೆ ಒಟ್ಟು 2,20,127 ಮತದಾರರಿದ್ದಾರೆ. ಜೇವರ್ಗಿ ವಿಧಾನಸಭಾ ಕ್ಷೇತ್ರ:   1,17,164 ಪುರುಷ,  1,15,903 ಮಹಿಳೆ ಸೇರಿದಂತೆ ಒಟ್ಟು  2,33,067 ಮತದಾರರಿದ್ದಾರೆ. ಗುರುಮಿಠಕಲ್ ವಿಧಾನಸಭಾ ಕ್ಷೇತ್ರ: 1,20,879 ಪುರುಷ, 1,21,761 ಮಹಿಳೆ ಸೇರಿದಂತೆ ಒಟ್ಟು 2,42,640 ಮತದಾರರಿದ್ದಾರೆ.  ಚಿತ್ತಾಪುರ ವಿಧಾನಸಭಾ ಕ್ಷೇತ್ರ: 1,14,018 ಪುರುಷ, 1,13,269  ಮಹಿಳೆ ಸೇರಿದಂತೆ ಒಟ್ಟು  2,27,287 ಮತದಾರರಿದ್ದಾರೆ. ಸೇಡಂ ವಿಧಾನಸಭಾ ಕ್ಷೇತ್ರ: 1,06,277 ಪುರುಷ, 1,08,268 ಮಹಿಳೆ ಸೇರಿದಂತೆ ಒಟ್ಟು 214545 ಮತದಾರರಿದ್ದಾರೆ.


ಕಲಬುರಗಿ ಗ್ರಾಮೀಣ ವಿಧಾನಸಭಾ ಕ್ಷೇತ್ರ: 1,28,730 ಪುರುಷ, 121358  ಮಹಿಳೆ ಸೇರಿದಂತೆ ಒಟ್ಟು  250088 ಮತದಾರರಿದ್ದಾರೆ.

ಕಲಬುರಗಿ ದಕ್ಷಿಣ ವಿಧಾನಸಭಾ ಕ್ಷೇತ್ರ: 1,29,760 ಪುರುಷ, 1,29,914 ಮಹಿಳೆ ಸೇರಿದಂತೆ ಒಟ್ಟು 259674  ಮತದಾರರಿದ್ದಾರೆ. ಕಲಬುರಗಿ ಉತ್ತರ ವಿಧಾನಸಭಾ ಕ್ಷೇತ್ರ: 1,38,428 ಪುರುಷ 1,35,121 ಮಹಿಳೆ ಸೇರಿದಂತೆ ಒಟ್ಟು 2,73,549 ಮತದಾರರಿದ್ದಾರೆ.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

8 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

10 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

16 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

17 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

17 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago