ಬಿಸಿ ಬಿಸಿ ಸುದ್ದಿ

ಸಸಿಗಳನ್ನು ಮಕ್ಕಳಂತೆ ಪೋಷಿಸಿ-ಸುರೇಶ ವರ್ಮಾ

ಶಹಾಬಾದ : ಸಸಿಗಳನ್ನು ಹಚ್ಚುವುದರ ಜತೆಗೆ ಅವುಗಳನ್ನು ಮಕ್ಕಳಂತೆ ಸಂರಕ್ಷಿಸಿ ಕಾಳಜಿಯಿಂದ ಬೆಳೆಸಬೇಕಲ್ಲದೇ, ಸಾಮಾಜಿಕ ಜವಾಬ್ದಾರಿಯನ್ನು ನಿರ್ವಹಿಸಬೇಕೆಂದು ತಹಸೀಲ್ದಾರ ಸುರೇಶ ವರ್ಮಾ ಹೇಳಿದರು.

ಅವರು ಸೋಮವಾರ ಅರಣ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಗರದ ಪೊಲೀಸ್ ಮೈದಾನದಲ್ಲಿ ವನಮಹೋತ್ಸವದ ಅಂಗವಾಗಿ ಆಯೋಜಿಸಲಾದ ಸಸಿ ನೆಡುವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮರಗಳನ್ನು ಬೆಳೆಸಿ ಸೂಕ್ತವಾದ ಪೋಷಣೆ ಮಾಡಿದರೆ ಕಾಲಕಾಲಕ್ಕೆ ಮಳೆಯಾಗುತ್ತದೆ. ಆದರೆ ಇಂದು ದೇಶದ ಎಲ್ಲಾ ಕಡೆ ಮುಂಗಾರು ಮಳೆ ಸರಿಯಾದ ವೇಳೆಗೆ ಬರದೇ ಇರುವದಕ್ಕೆ ಈ ಪರಿಸರ ನಾಶವೇ ಕಾರಣ. ಕೇವಲ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂದು ಹೇಳಿಕೊಂಡು ಕೂಡದೇ ಅದನ್ನು ಕಾರ್ಯರೂಪಕ್ಕೆ ತಂದರೆ ಮಾತ್ರ ಆ ಘೋಷ ವಾಕ್ಯಕ್ಕೆ ಮನ್ನಣೆ ಬರುತ್ತದೆ. ಇದನ್ನು ಪ್ರತಿಯೊಬ್ಬರೂ ಪಾಲಿಸಬೇಕು.ಹೆಚ್ಚು ಹೆಚ್ಚು ಮರಗಳನ್ನು ಬೆಳೆಸುವುದರಿಂದ ಉತ್ತಮ ಪರಿಸರದೊಂದಿಗೆ ಆರೋಗ್ಯಕರ ವಾತಾವರಣ ನಿರ್ಮಾಣವಾಗುತ್ತದೆ ಎಂದು ಹೇಳಿದರು.


ವಲಯ ಅರಣ್ಯಾಧಿಕಾರಿ ವಿಜಯಕುಮಾರ ಮಾತನಾಡಿ, ಪರಿಸರ ಸಮತೋಲನ ಕಾಪಾಡಲು ನಾವು ಹೆಚ್ಚು ಹೆಚ್ಚು ಸಸಿಗಳನ್ನು ಬೆಳೆಸುವ ಮುಖಾಂತರ ಪರಿಸರ ಸಂರಕ್ಷಣೆ ಮಾಡಬೇಕು. ಅಲ್ಲದೇ ಪರಿಸರ ಸಂರಕ್ಷಣೆಯಲ್ಲಿ ಸುಂದರಲಾಲ ಬಹುಗುಣ ಹಾಗೂ ಸಾಲು ಮರದ ತಿಮ್ಮಕ್ಕರ ಶ್ರಮ ಬಹಳಷ್ಟಿದೆ ಎಂದರು. ಅಲ್ಲದೇ ಹಳ್ಳಿ ಹಳ್ಳಿಗಳಿಗೂ ಈ ಪರಿಸರದ ಬಗ್ಗೆ ಅರಿವು ಮೂಡಿಸಬೇಕಾದ ಜವಾಬ್ದಾರಿ ನಮ್ಮದಾಗಿದೆ ಎಂದರು.


ಜಿಲ್ಲಾ ಸತ್ರ ನ್ಯಾಯಾಲಯದ ಸರಕಾರಿ ಅಭಿಯೋಜಕಿ ಅಂಜನಾ ಚೌಹಾಣ ಚಾಲನೆ ನೀಡಿದರು. ಉಪ ವಲಯ ಅರಣ್ಯಾಧಿಕಾರಿ ಮಂಜುನಾಥ ಹಂದರಾಳ, ನಗರಸಭೆಯ ಪೌರಾಯುಕ್ತ ಕೆ.ಗುರಲಿಂಗಪ್ಪ, ಪಿಐ ಅಮರೇಶ.ಬಿ,ನೈರ್ಮಲ್ಯ ನಿರೀಕ್ಷಕ ಶಿವರಾಜಕುಮಾರ, ಪರಶುರಾಮ, ಶಿವಕುಮಾರ, ಸಂತೋಷ ಕುಲಕರ್ಣಿ,ಅವ್ವಣ್ಣ, ಯಾದವ ರಾಠೋಡ ಇತರರು ಪಾಲ್ಗೊಂಡಿದ್ದರು.

emedia line

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

22 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago