ಬಿಸಿ ಬಿಸಿ ಸುದ್ದಿ

ಗ್ರಾಹಕರಿಂದ ವ್ಯಾಪಾರಿಗಳಿಗೆ ಸೋಂಕು: ಸುಳೆ ಆತಂಕ

ವಾಡಿ: ಪಟ್ಟಣದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಈಗಾಗಲೇ ಸ್ಥಳೀಯ ಮಾರುಕಟ್ಟೆಯ ಎಂಟು ಜನ ವ್ಯಾಪಾರಿಗಳು ಮಹಾಮಾರಿ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗ್ರಾಹಕರಿಂದ ಸೋಂಕು ಪಸರಿಸುತ್ತಿದ್ದು, ವ್ಯಾಪಾರಿಗಳು ಎಚ್ಚರದಿಂದರಬೇಕು ಎಂದು ಕಿರಾಣಾ ಮರ್ಚಂಟ್ ಅಸೋಸಿಯೇಷನ್ ಅಧ್ಯಕ್ಷ ಭಾವತ ಸುಳೆ ಮನವಿ ಮಾಡಿದ್ದಾರೆ.

ಕಿರಾಣಿ ವ್ಯಾಪಾರಿಗಳ ಅಂಘದ ವತಿಯಿಂದ ಕರೆಯಲಾಗಿದ್ದ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ಪ್ರಾಣಕಂಟಕ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಜನರಲ್ಲಿ ಸಾಮಾಜಿಕ ಅಂತರ ಮಾಯವಾಗಿದ್ದು, ಸೋಂಕು ಸರಳವಾಗಿ ಒಬ್ಬರಿಂದ ಒಬ್ಬರಿಗೆ ತಗಲುತ್ತಿದೆ. ಸ್ಥಳೀಯರು ಸೇರಿದಂತೆ ಸುತ್ತಲ ಗ್ರಾಮಗಳ ಜನರು ಅಗತ್ಯ ವಸ್ತುಗಳ ಖರೀದಿಗಾಗಿ ನಗರಕ್ಕೆ ಬರುತ್ತಾರೆ. ಅಂಗಡಿ ವ್ಯಾಪಾರಿಗಳನ್ನು ಸ್ಪರ್ಷಿಸಿ ವ್ಯವಹಾರ ನಡೆಸುತ್ತಿರುತ್ತಾರೆ. ಇದು ಅಪಾಯಕ್ಕೆ ದಾರಿಯಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಅಂಗಡಿಗಳ ಮುಂದೆ ಗ್ರಾಹಕರನ್ನು ಅಂತರದಲ್ಲಿ ಸಲಾಗಿ ನಿಲ್ಲಿಸಿ ದೂರದಿಂದಲೇ ದಿನಸಿ ವಿತರಿಸಬೇಕು. ಗ್ರಾಹಕರು ಮತ್ತು ವರ್ತಕರು ಪದೇಪದೆ ಸ್ಯಾನಿಟೈಸರ್‌ನಿಂದ ಕೈಗಳನ್ನು ಸುಚಿಗೊಳಿಸಿಕೊಳ್ಳಬೇಕು. ಮುಖಕ್ಕೆ ಮಾಸ್ಕ್ ಧರಿಸಿದವರಿಗೆ ಮಾತ್ರ ದಿನಸಿ ವಿತರಿಸುವ ನಿಯಮ ಪಾಲಿಸಬೇಕು. ನಮ್ಮ ಮತ್ತು ನಮ್ಮ ಕುಟುಂಬಸ್ಥರ ಆರೋಗ್ಯ ಕಾಳಜಿ ನಾವೇ ಮಾಡಬೇಕಿದೆ. ಗ್ರಾಹಕರಿಂದ ವ್ಯಾಪಾರಿಗಳಿಗೆ ಅಥವ ವ್ಯಾಪಾರಿಗಳಿಂದ ಗ್ರಾಹಕರಿಗೆ ಸೋಂಕು ಹರಡುವ ಸಾಧ್ಯತೆಯಿರುತ್ತದೆ.

ಯಾವೂದೇ ಕಾರಣಕ್ಕೂ ನಿರ್ಲಕ್ಷ್ಯದಿಂದ ವರ್ತಿಸಬಾರದು ಎಂದಿರುವ ಭಾವತ ಸುಳೆ, ಪಟ್ಟಣದಲ್ಲಿ ಕೊರೊನಾ ಅಟ್ಟಹಾಸ ನಿಯಂತ್ರಣಕ್ಕೆ ಬರುವ ವರೆಗೂ ವಾಡಿ ಪಟ್ಟಣದಲ್ಲಿ ಪ್ರತಿದಿನ ಬೆಳಗ್ಗೆ ೮:೦೦ ರಿಂದ ಮದ್ಯಾಹ್ನ ೨:೦೦ ಗಂಟೆ ವರೆಗೆ ಮಾತ್ರ ಕಿರಾಣಿ ಅಂಗಡಿಗಳು ತೆರೆದಿರುತ್ತವೆ. ಭಾನುವಾರದ ಸಂಪೂರ್ಣ ಲಾಕ್‌ಡೌನ್ ಪಾಲಿಸಬೇಕಾದ್ದರಿಂದ ವಾರದ ರಜಾ ದಿನವಾದ ಸೋಮವಾರ ವ್ಯಾಪಾರ ನಡೆಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ. ಸೋಂಕಿನಿಂದ ರಕ್ಷಣೆ ಪಡೆಯಲು ಪುರಸಭೆ ಅಧಿಕಾರಿಗಳು ಮಾರುಕಟ್ಟೆ ಪ್ರದೇಶದಲ್ಲಿ ಪ್ರತಿನಿತ್ಯ ಸ್ಯಾನಿಟೈಸರ್ ಸಿಂಪರಣೆ ಮಾಡಲು ಮುಂದಾಗಬೇಕು. ಕಸ ವಿಲೇವಾರಿ ಸಮರ್ಪಕವಾಗಿ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ಕಿರಾಣಿ ವ್ಯಾಪಾರಿಗಳ ಸಂಘದ ಉಪಾಧ್ಯಕ್ಷ ಪರಮೇಶ್ವರ ಬಿಲಗುಂದಿ. ಸದಸ್ಯ ಮಹ್ಮದ್ ಅಕ್ರಂ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

emedialine

Recent Posts

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

31 mins ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

32 mins ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

37 mins ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

41 mins ago

ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಬೇಡಿ

ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…

43 mins ago

ಸೇಡಂ: `ಅಮ್ಮ ಪ್ರಶಸ್ತಿ’ ಪ್ರದಾನ ಸಮಾರಂಭ ನಾಳೆ

ಸೇಡಂ (ಕಲಬುರಗಿ);  ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…

1 hour ago